Breaking News

ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಚಾಲನೆ

Spread the love

ಬೆಳಗಾವಿ: ಎರಡು ದಿನಗಳ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವದ ಮೆರವಣಿಗೆಗೆ ಇಂದು ಬೆಳಗ್ಗೆ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಜಾನಪದ ಕಲಾವಾಹಿನಿಗಳು, ಕಲಾತಂಡಗಳು ಗಮನ ಸೆಳೆದವು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯ ವತಿಯಿಂದ ಆಯೋಜಿಸಲಾದ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿತು. ಸಂಗೊಳ್ಳಿಯ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ರಾಯಣ್ಣನ ಪ್ರತಿಮೆಗೆ ಪ್ರಾತಃಕಾಲದಲ್ಲಿ ಪೂಜೆ ಸಲ್ಲಿಸಲಾಯಿತು.

ಬೈಲಹೊಂಗಲ‌ ಶಾಸಕ ಮಹಾಂತೇಶ ಕೌಜಲಗಿ ಅವರು, ರಾಜ್ಯದ ವಿವಿಧೆಡೆ ಸಂಚರಿಸಿ ಸಂಗೊಳ್ಳಿಗೆ ಆಗಮಿಸಿದ ಜ್ಯೋತಿಯನ್ನು ಬರಮಾಡಿಕೊಂಡರು. ಬಳಿಕ ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ ಅವರು ಸಂಗೊಳ್ಳಿ ರಾಯಣ್ಣ‌ ಸ್ಮಾರಕ ಭವನದ ಆವರಣದಲ್ಲಿ ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿ‌ದರು.ಚನ್ನಮ್ಮನ ಕಿತ್ತೂರು ಶಾಸಕ‌ ಬಾಬಾಸಾಹೇಬ್ ಪಾಟೀಲ ಅವರು ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು.

ಕುಂಭ ಹೊತ್ತ ಮಹಿಳೆಯರು, ಪೂಜಾಕುಣಿತ, ನಂದಿಕೋಲು, ವೀರಗಾಸೆ, ಡೊಳ್ಳು, ಬೊಂಬೆಕುಣಿತ, ಸೇರಿದಂತೆ ವಿವಿಧ ಕಲಾತಂಡಗಳು ಉತ್ಸವಕ್ಕೆ ಮೆರುಗು ತಂದವು. ವಾದ್ಯಗಳ ಕರತಾಡನ, ನೃತ್ಯದ ಸೊಬಗು ಇಡೀ‌ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿತು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ