ಬೆಂಗಳೂರು, ಜನವರಿ 13: ಎನ್ಆರ್ ಜಂಕ್ಷನ್, ಹೂಡಿ ಜಂಕ್ಷನ್, ಶಿವಾಜಿನಗರ ಮತ್ತು ನಾಯಂಡಹಳ್ಳಿ ಸೇರಿದಂತೆ ಇತರೆ ನಗರಗಳಲ್ಲಿ ಇಂದು ಕೆಲ ಕಾರಣಾಂತರಗಳಿಂದ ಸಾರ್ವಜನಿಕ ವಾಹನ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿತ್ತು. ಹಾಗಾಗಿ ಆಯಾ ಠಾಣಾ ವ್ಯಾಪ್ತಿಯ ಸಂಚಾರಿ ಪೋಲಿಸರು ಸಂಚಾರ ಸಲಹೆ (Traffic Advisory) ನೀಡುವ ಮೂಲಕ ದಯವಿಟ್ಟು ಸಹಕರಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ
.ಎನ್ಆರ್ ಜಂಕ್ಷನ್ ಬಳಿ ವಾಹನ ಕೆಟ್ಟು ನಿಂತಿರುವುದರಿಂದ ಟೌನ್ ಹಾಲ್ ಕಡೆಗೆ ನಿಧಾನಗತಿಯ ಸಂಚಾರವಿದೆ. ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ಕೋರಿದ್ದಾರೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆಯಲ್ಲೇ ತೊಂದರೆ ಆಗುವ ರೀತಿಯಲ್ಲಿ ಅತೀ ವೇಗವಾಗಿ ಮತ್ತು ಅಜಾಗರೂಕತೆಯಿಂದ ವೀಲಿಂಗ್ ಮಾಡಿದ್ದ ವಾಹನ ಚಾಲಕ ಮತ್ತು ವಾಹನವನ್ನು ಹಿಡಿದು ಕಾನೂನು ರೀತಿ ಕ್ರಮ ಕೈಗೊಂಡಿದ್ದಾರೆ.
ಈ ದಿನ ಮಹದೇವಪುರ ಠಾಣಾ ವ್ಯಾಪ್ತಿಯ ಹೂಡಿ ಜಂಕ್ಷನ್ ಹತ್ತಿರ ಇದ್ದಂತಹ ರಸ್ತೆ ಗುಂಡಿಯನ್ನು ಮುಚ್ಚಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇಎಸ್ಐ ಜಂಕ್ಷನ್ ಹತ್ತಿರ ವಾಹನ ಸವಾರರಿಗೆ ಐಎಸ್ಐ ಮಾರ್ಕ್ ಹೆಲ್ಮೆಟ್ ಧರಿಸುವ ಕುರಿತು ಹಾಗೂ ಸಂಚಾರ ನಿಯಮಗಳ ಪಾಲನೆ ಮತ್ತು ಉಲ್ಲಂಘನೆಯಿಂದ ಆಗುವ ಪರಿಣಾಮಗಳ ಕುರಿತು ತಿಳುವಳಿಕೆ ನೀಡಲಾಗಿದೆ.
Laxmi News 24×7