Breaking News

ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಕಾರು ಅಪಘಾತ; ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರು

Spread the love

ಬೆಳಗಾವಿ, ಜನವರಿ 14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ದಿನವಾದ ಇಂದು ಮಂಗಳವಾರ ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ ಘಟನೆ ನಡೆದಿರುವುದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದೆ.ಈ ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ನಾಯಿ ತಪ್ಪಿಸಲು ಹೋಗಿ ಅಪಘಾತ

ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದಾರಿಯಲ್ಲಿ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನ ಮಾಡಿದಾಗ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟಕ್ಕೆ ಕಾರಿನೊಳಗಿದ್ದವರಿಗೆ ಯಾವ ಪ್ರಾಣಾಪಾಯವಾಗಿಲ್ಲ.

ಆಸ್ಪತ್ರೆಗೆ ಭೇಟಿ ನೀಡಿದ ಬೆಳಗಾವಿ ಎಸ್​ಪಿ

ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ದಾಖಲು ಮಾಡಿರುವ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಎಸ್​ಪಿ ಭೀಮಾಶಂಕರ್ ಗುಳೇದ್ ಅವರು ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಹೆಬ್ಬಾಳ್ಕರ್ ಅವರ ತಾಯಿ ಹಾಗೂ ಸಹೋದರಿ ಕೂಡ ಆಸ್ಪತ್ರೆಗೆ ದೌಡಾಯಿಸಿ ಬಂದಿದ್ದಾರೆ.

ಇದೇ ವೇಳೆ, ಕೇಂದ್ರ ಗೃಹಸಚಿವ ಡಾ. ಜಿ ಪರಮೇಶ್ವರ್ ಅವರೂ ಕೂಡ ದೂರವಾಣಿ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅವರಿಗೆ ಜಿ. ಪರಮೇಶ್ವರ್ ಕರೆ ಮಾಡಿ ಮಾಹಿತಿ ಪಡೆದಿದ್ದು, ತಾಯಿಗೆ ಒಳ್ಳೆಯ ಚಿಕಿತ್ಸೆ ಕೊಡಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ