Breaking News

ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ

Spread the love

ಬೆಳಗಾವಿ: ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಇಂದು ನಡೆದಿದೆ.

ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪದಮುಕಿ(43) ಕೊಲೆಯಾದ ಮಹಿಳೆ. ಮಲ್ಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ(24) ಕೊಲೆ ಮಾಡಿದ ಆರೋಪಿ. ರೈತ ಗಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ಮಗಳು ಛಾಯಾ, ಅಳಿಯ ಶುಭಂ ಜೊತೆ ವಾಸವಾಗಿದ್ದರು. ಕಳೆದ 7 ತಿಂಗಳ ಹಿಂದೆ ಅಷ್ಟೇ ಇವರ ಮದುವೆ ಆಗಿತ್ತು.

BELAGAVI MURDER CASE

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮಗಳಿಗೆ ಸಂಕ್ರಾಂತಿ ಊಟ ಕೊಡೊಕೆ ರೇಣುಕಾ ಪದಮುಕಿ ಬಂದಿದ್ದರು. ಈ ವೇಳೆ, ನಮ್ಮ ಮನೆಗೆ ಏಕೆ ಬರುತ್ತಿಯಾ ಎಂದು ಅಳಿಯ ಶುಭಂ ತಗಾದೆ ತೆಗೆದಿದ್ದ. ಆಗ ಮಾತಿಗೆ ಮಾತು ಬೆಳೆದು ಗಲಾಟೆ ಆಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಅತ್ತೆಯ ತೊಡೆಯ ಭಾಗಕ್ಕೆ ಶುಭಂ ಇರಿದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ರೇಣುಕಾ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ