Breaking News

ಪೊಲೀಸರು ಸ್ಥಳ ಮಹಜರಿಗೂ ಮೊದಲೇ ಕಾರನ್ನು ಬೆಳಗಾವಿ ಹೊರ ವಲಯದಲ್ಲಿರುವ ಶೋರೂಮ್​ಗೆ ಶಿಫ್ಟ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

Spread the love

ಬೆಳಗಾವಿ,  ಸಚಿವೆ ಲಕ್ಷ್ಮೀ ಹೆಬ್ಬಾಕ್ಳರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಇಂದು (ಜನವರಿ 14) ಸಂಕ್ರಾಂತಿ ಹಬ್ಬದ ದಿನವೇ ಬೆಳಗಾವಿಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿಗಳು ಅಡ್ಡಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹೆಬ್ಬಾಳ್ಕರ್​ ಗಾಯಗಳಾಗಿವೆ.

ಇನ್ನು ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಸರ್ಕಾರಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ಗನ್​ಮ್ಯಾನ್ ಈರಪ್ಪ ಹುಣಶಿಕಟ್ಟಿ ದೂರಿನ ಮೇರೆಗೆ ಕಾರು ಚಾಲಕ ಜಿ.ಶಿವಪ್ರಸಾದ್ ವಿರುದ್ಧ ಕಿತ್ತೂರು ಠಾಣೆಯಲ್ಲಿ 281, 125ಎ, 125ಬಿ ಅಡಿ ಪ್ರಕರಣ ದಾಖಲಾಗಿದೆ.

ಜೀವಕ್ಕೆ ಕುತ್ತು ತುರುವ ಹಾಗೂ ನಿಷ್ಕಾಳಜಿ ವಾಹನ ಚಾಲನೆ, ಅಜಾಗರುತೆಯಿಂದ ವಾಹನ ಚಾಲನೆ ಕಲಂಗಳಲ್ಲಿ ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತ ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಕಾರು ಚಾಲಕನ ಹೇಳಿಕೆ ದಾಖಲಿಸಿಕೊಂಡು ಬಿಟ್ಟು ಕಳುಹಿಸಿದ್ದಾರೆ.ಕಿತ್ತೂರು ಠಾಣೆ ಸಿಪಿಐ ಮತ್ತು ಪಿಎಸ್ಐ ಅಪಘಾತ ನಡೆದ ಸ್ಥಳಕ್ಕೆ ಸ್ಥಳಕ್ಕೆ ಭೇಟಿ ನೀಡಿದ್ದು, ನಾಯಿ ಅಡ್ಡ ಬಂದಿದ್ದಕ್ಕೆ ಸಚಿವೆ ಹೆಬ್ಬಾಳ್ಕರ್ ಕಾರು ಅಪಘಾತ ಆಯ್ತಾ? ಅಥವಾ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ಯಾ ಎನ್ನುವ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ