Breaking News

ಮುಡಾ ಹಗರಣ ‘CBI’ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಜ.27ಕ್ಕೆ ಮುಂದೂಡಿಕೆ

Spread the love

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.27ಕ್ಕೆ ಮುಂದೂಡಿದೆ.

ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತಕುಮಾರ ಮಾತನಾಡಿ, “ಮುಡಾ ಹಗರಣ ಸಂಬಂಧ ಎರಡ್ಮೂರು ಬಾರಿ ವಿಚಾರಣೆ ಬೆಂಗಳೂರನಲ್ಲಿ ನಡೆದಿತ್ತು. ಮುಡಾ ಹಗರಣ ಸಂಬಂಧ ಲೋಕಾಯುಕ್ತದಲ್ಲಿ ಎಫ್‌ಐಆರ್ ಆಗಿದೆ. ಆ ತನಿಖೆ ಪ್ರಮಾಣಿಕವಾಗಿ ಆಗಬೇಕೆಂದು ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದೆವು. ಲೋಕಾಯುಕ್ತ ರಾಜ್ಯ ಸರ್ಕಾರದ ಕೈ ಗೊಂಬೆಯಂತೆ ಕೆಲಸ ಮಾಡುತ್ತಿದೆ. ಹೀಗಾಗಿ ನಾವು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದೆವು” ಎಂದು ತಿಳಿಸಿದರು.

“ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೇಳಿದ್ದೆವು. ಧಾರವಾಡ ಹೈಕೋರ್ಟ್ ಪೀಠದಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಮಣಿಂದರ್​ ಸಿಂಗ್ ಅವರು ಸುದೀರ್ಘವಾಗಿ ವಾದ ಮಂಡಿಸಿದ್ದಾರೆ. ವಾದ ಆಲಿಸಿದ ನ್ಯಾಯಪೀಠ ಜ.27ಕ್ಕೆ ವಿಚಾರಣೆಯನ್ನು ಮುಂದೂಡಿದೆ” ಎಂದರು.

ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಿಡಿಯೋ ಕಾಲ್​ ಮೂಲಕ ವಾದ ಮಂಡಿಸಿದರು. ಕೋರ್ಟ್ ಒಳಗೆ ಹೋಗುವುದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, “ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗಿತ್ತು. ಈ ಸಂಬಂಧ ದೂರು ದಾಖಲು ಮಾಡಿದ್ದೆ. ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಇದರಲ್ಲಿ ಭಾಗಿಯಾಗಿದೆ. ಲೋಕಾಯುಕ್ತ ಹಗರಣದ ಬಗ್ಗೆ ಸೂಕ್ತ ತನಿಖೆ ಆಗುವುದಿಲ್ಲ. ಹೀಗಾಗಿ ಹಗರಣದ ತನಿಖೆ ಸಿಬಿಐಗೆ ವಹಿಸಬೇಕು ಎಂದು ಕೇಳಿದ್ದೇನೆ” ಎಂದಿದ್ದರು.

“ಅರ್ಜಿ ಬಗ್ಗೆ ಸಾಕಷ್ಟು ವಿಚಾರಣೆ ಆಗಿದೆ. ಇವತ್ತು ಅಂತಿಮ ಆದೇಶ ಹೊರ ಬರುವ ಸಾಧ್ಯತೆ ಇದೆ. ಜಡ್ಜ್ ಇಂದು ಧಾರವಾಡ ಪೀಠಕ್ಕೆ ಬಂದಿದ್ದಾರೆ. ಹೀಗಾಗಿ ಇಲ್ಲಿ ವಿಚಾರಣೆ ನಡೆಯಲಿದೆ. ನನ್ನ ಪರ ವಕೀಲರಾದ ಮಣಿಂದರ್​ ಸಿಂಗ್ ಬಂದಿದ್ದಾರೆ. ಎಲ್ಲರೂ ಇಲ್ಲಿಗೆ ಬಂದಿದ್ದೇವೆ. ನ್ಯಾಯಾಲಯ ಮುಡಾ ಹಗರಣದ ತನಿಖೆಯನ್ನು ಸಿಬಿಐ ನೀಡುತ್ತದೆ” ಎಂಬ ಭರವಸೆ ಇದೆ ಎಂದು ತಿಳಿಸಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ