Breaking News

ಜಾತಿಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

Spread the love

ಬೆಂಗಳೂರು, ಜನವರಿ 16: ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಈ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ತೀರ್ಮಾನಸಲಾಗಿದೆ. ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂದಿಡಲು ನಿರ್ಧರಿಸಲಾಗಿದೆ. ಆ ಮೂಲಕ ಕರ್ನಾಟಕವೇ ಎದುರು ನೋಡುತ್ತಿದ್ದ ಜಾತಿಗಣತಿ ವರದಿ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ.ಇಂದಿನ ಸಚಿವ ಸಂಪುಟದಲ್ಲೇ ಜಾರಿಗಣತಿ ವರದಿ ಮಂಡನೆಯಾಗಲಿದೆ ಎನ್ನುವ ಚರ್ಚೆಗಳು ನಡೆದಿದ್ದವು. ಆದ್ರೆ, ಈ ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ಮಾಡುವುದಿಲ್ಲ. ಬದಲಾಗಿ ಮುಂದಿನ ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು. ಅದರಂತೆ ಇಂದಿನ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ.

ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 35 ವಿಷಯಗಳು ಚರ್ಚೆ ಮತ್ತು ನಿರ್ಣಯಕೈಗೊಳ್ಳಲಾಗಿದೆ. ಅದರಲ್ಲಿ ಪ್ರಮುಖವಾಗಿ, ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ಮುಂದಿನ ಕ್ಯಾಬಿನೆಟ್‌ಗೆ ತರಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ತಿಳಿಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ