Breaking News

ಅಹಿಂದ ನಾಯಕರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ ಖರ್ಗೆಯನ್ನೇ:ಡಿಕೆ ಶಿ

Spread the love

ಬೆಂಗಳೂರು, ಜನವರಿ 16: ಕರ್ನಾಟಕ ಕಾಂಗ್ರೆಸ್​ನಲ್ಲಿ ಮತ್ತೆ ಭುಗಿಲೆದ್ದಿರುವ ನಾಯಕತ್ವ ಬದಲಾವಣೆ ವಿಚಾರವಾಗಿ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಹೊಸ ದಾಳ ಉರುಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಲಿ. ಇವರು (ಅಹಿಂದ ನಾಯಕರು) ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ, ಖರ್ಗೆ ಅವರನ್ನು ಎಂದಿದ್ದಾರೆ.

ಯಾವುದಾದರೂ ವಿಚಾರ ಇದ್ದರೆ ನಾನೇ ಮಾಧ್ಯಮವರಿಗೆ ತಿಳಿಸುತ್ತೇನೆ. ಯಾರೂ ಕೂಡ ಬಹಿರಂಗವಾಗಿ ಮಾತನಾಡಬಾರದು ಎಂದಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಸಹ ಬೆಳಗಾವಿಗೆ ಬರುತ್ತಿದ್ದಾರೆ. ಏನಾದರೂ ಇದ್ದರೆ ರಾಹುಲ್ ಗಾಂಧಿ, ಖರ್ಗೆ ಜತೆ ಮಾತನಾಡಲಿ. ಅವರವರ ಶ್ರಮಕ್ಕೆ ತಕ್ಕ ಸ್ಥಾನವನ್ನು ನಾಯಕರು ಕೊಡುತ್ತಾರೆ. ಶ್ರಮಪಟ್ಟು ನಾನು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಲ್ಲ, ಕಾರ್ಯಕರ್ತರು ತಂದಿದ್ದು. ನಮ್ರತೆಯಿಂದ ಮನವಿ ಮಾಡ್ತೇನೆ, ಕಾಂಗ್ರೆಸ್ ಎಂಬುದು ಕಾರ್ಯಕರ್ತರ ಪಕ್ಷ ಎಂದು ಡಿಕೆ ಶಿವಕುಮಾರ್ ಹೇಳಿದರು.

ಮಹಾತ್ಮ ಗಾಂಧಿಯೇ ಎಲ್ಲವನ್ನೂ ತ್ಯಾಗ ಮಾಡಿದರು. ಅವರು ಮನಸ್ಸು ಮಾಡಿದ್ದರೆ ಪ್ರಧಾನಿ ಆಗುತ್ತಿರಲಿಲ್ಲವೇ ಎಂದು ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ