ಮಂಗಳೂರು: ಬೀದರ್ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದ ಸಿಬ್ಬಂದಿಗೆ ಗುಂಡು ಹಾರಿಸಿ ಹಣ ದೋಚಿರುವ ಪ್ರಕರಣದ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ.
ನಗರದ ಹೊರವಲಯದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಇಂದು ಹಾಡಹಗಲೇ ಮುಸುಕುಧಾರಿಗಳು ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 12:30 ರ ನಡುವೆ ಶಸ್ತ್ರಸಜ್ಜಿತ ತಂಡದಿಂದ ದರೋಡೆ ನಡೆದಿದೆ.
ಸುಮಾರು 25 ರಿಂದ 35 ವರ್ಷ ವಯಸ್ಸಿನ ಐದಾರು ಜನರ ತಂಡ ಮುಖಕ್ಕೆ ಮಾಸ್ಕ್ ಧರಿಸಿ, ಪಿಸ್ತೂಲ್, ತಲ್ವಾರ್ ಮತ್ತು ಚಾಕು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಬ್ಯಾಂಕ್ಗೆ ಪ್ರವೇಶಿಸಿದೆ. ಈ ವೇಳೆ ಐದು ಮಂದಿ ಉದ್ಯೋಗಿಗಳು ಬ್ಯಾಂಕಿನಲ್ಲಿದ್ದರು. ಆ ಬಳಿಕ ಬ್ಯಾಂಕ್ ಸಿಬ್ಬಂದಿಗಳನ್ನು ಬೆದರಿಸಿ ದರೋಡೆ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾರೆ
Laxmi News 24×7