ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಬೂದಿಗೊಪ್ಪ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ವಿಠ್ಠಲ ಆಲದಕಟ್ಟಿ, ಸೋಮಲಿಂಗ ಬೆಳವಡಿ, ಸಣ್ಣಪ್ಪ ಲಚಮಕ್ಕನವರ, ಯಲ್ಲಪ್ಪ ಮುತ್ತೆನ್ನವರ, ಮಾದೇವ ಅಲಡಾಕಟ್ಟಿ, ಮುರಾರಿ ತೇನಗಿ, ಶಿವಪ್ಪ ಪುಲ್ಲಿ .
ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.
Laxmi News 24×7