Breaking News

ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸ ಮಾಡುತ್ತೇವೆ : ಡಿ ಕೆ ಶಿ

Spread the love

ಹುಬ್ಬಳ್ಳಿ: ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ ಎನ್ನುವ ಮೂಲಕ ಬೆಳಗಾವಿಯಿಂದಲೇ ಕಾಂಗ್ರೆಸ್ ಪತನ ಎನ್ನುವ ಬಿಜೆಪಿ ಹೇಳಿಕೆಗೆ ಡಿಸಿಎಂ ಡಿ‌. ಕೆ ಶಿವಕುಮಾರ್ ತಿರುಗೇಟು ನೀಡಿದರು.

ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗನಲ್ಲಿ ಜೈ ಬಾಪೂ, ಜೈ ಭೀಮ, ಜೈ ಸಂವಿಧಾನ ಕಾರ್ಯಕ್ರಮ ಜ. 21 ರಂದು ನಡೆಯಲಿದೆ. ಈ ಹಿನ್ನೆಲೆ ಜ. 18 ರಂದು ಪೂರ್ವಭಾವಿ ಸಭೆ ನಡೆಸುತ್ತಿದ್ದೇವೆ. ಇದರಲ್ಲಿ ಸುರ್ಜೇವಾಲಾ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಬೆಳಗಾವಿಯಲ್ಲಿ ಗಾಂಧಿ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಇದು ಸರ್ಕಾರದ ಕಾರ್ಯಕ್ರಮ, ಸಿಎಂ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಪಕ್ಷಭೇದ ಮರೆತು ಎಲ್ಲರನ್ನೂ ಇದಕ್ಕೆ ಆಹ್ವಾನಿಸಲಾಗುವುದು ಎಂದರು.

ಜೈಬಾಪೂ, ಜೈಭೀಮ, ಜೈ ಸಂವಿಧಾನ ಎಂಬ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು. ಇದೊಂದು ದೊಡ್ಡ ಇತಿಹಾಸವಾಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ. ಈ ಬಗ್ಗೆ ಗೃಹ ಸಚಿವರು ಪ್ರತಿಕ್ರಿಯೆ ನೀಡುತ್ತಾರೆ ಎಂದರು.

ಕೆಪಿಸಿಸಿ ಅಧ್ಯಕ್ಷತೆ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಸೇರಿದಂತೆ ಯಾರೂ ಕೂಡ ಬಹಿರಂಗವಾಗಿ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಇದರ ಬಗ್ಗೆ ಯಾರೇ ಮಾತನಾಡಿದರೂ ಹೈಕಮಾಂಡ್ ಈ ಬಗ್ಗೆ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ನಮ್ಮ ರಾಷ್ಟ್ರೀಯ ನಾಯಕರು. ಅವರ ಮಾರ್ಗದರ್ಶನದಲ್ಲಿ ನಾವು ಕಾರ್ಯಕರ್ತರಾಗಿ ಮುನ್ನಡೆಯುತ್ತೇವೆ. ಮಹದಾಯಿ ವಿಚಾರವಾಗಿ ನಾವು ಸಚಿವ ಹೆಚ್.ಕೆ. ಪಾಟೀಲ್ ಅವರೊಂದಿಗೆ ಚರ್ಚೆ ಮಾಡಿದ್ದೇವೆ. ಈ ಹಿಂದೆ ದೆಹಲಿಯಲ್ಲಿ ಸಭೆ ಮಾಡಿದ್ದೇವೆ. ಪ್ರಧಾನಿಯವರಿಗೆ ಮನವಿ ಮಾಡಿದ್ದೇವೆ. ಸಂಬಂಧಪಟ್ಟ ಸಚಿವರಿಗೆ ಸೂಚನೆ ಕೊಡುವುದಾಗಿ ಪ್ರಧಾನಿ ಹೇಳಿದ್ದಾರೆ. ಮುಂದಿನ ಸಂಸತ್ ಅಧಿವೇಶನದಲ್ಲಿ ಮಹದಾಯಿ ಕುರಿತು ಒತ್ತಡ ತರುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ