ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ವನ್ಯಜೀವಿ ಮಂಡಳಿ ಮುಂದಿನ ಎರಡು ತಿಂಗಳ ಒಳಗಾಗಿ ಅನುಮತಿ ನೀಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಕಾನೂನು ಸಚಿವ ಹೆಚ್. ಕೆ.ಪಾಟೀಲ್ ಎಚ್ಚರಿಕೆ ಕೊಟ್ಟಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಡೆದ ಸಂಸತ್ ಅಧಿವೇಶನದಲ್ಲಿ ಫಾರೆಸ್ಟ್ ಕ್ಲಿಯರೆನ್ಸ್ ಸಿಗಬಹುದೆಂಬ ಆಶಾವಾದ ನಮ್ಮದು ಆಗಿತ್ತು. ಆದರೆ ಕೇಂದ್ರ ಸರ್ಕಾರ ನಿರಾಶೆ ಮಾಡಿದೆ. ಅದೇ ಚುನಾವಣೆಗಳು ಬಂದಾಗ ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರು, ಸಂಸದರು ಈ ಬಗ್ಗೆ ಮಾತನಾಡುತ್ತಾರೆ. ಅದೇ ಮಹದಾಯಿ ಸಭೆ ವಿಚಾರ ಬಂದಾಗ ಮುಂದಕ್ಕೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಈ ರೀತಿಯಾಗಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದರು.
ಹೀಗಾಗಿ ಮುಂದಿನ ಎರಡು ತಿಂಗಳಲ್ಲಿ ಯೋಜನೆಗೆ ಫಾರೆಸ್ಟ್ ಕ್ಲಿಯರೆನ್ಸ್’ನ್ನು ಕೇಂದ್ರ ಸರ್ಕಾರ ನೀಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
Laxmi News 24×7