Breaking News

ಯತ್ನಾಳ್​ ಒಬ್ಬ ಗೋಮುಖ ವ್ಯಾಘ್ರ,:ರೇಣುಕಾಚಾರ್ಯ

Spread the love

ಬೆಂಗಳೂರು, ಜನವರಿ 19: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಒಬ್ಬ ಗೋಮುಖ ವ್ಯಾಘ್ರ. ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯತ್ನಾಳ್​ರನ್ನ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಬಳಿಕ ಜೆಡಿಎಸ್​ಗೆ ಹೋಗಿದ್ದರು. ಯಡಿಯೂರಪ್ಪನವರ ಕಾಲು ಹಿಡಿದು ಮತ್ತೆ ಬಿಜೆಪಿಗೆ ಸೇರಿಕೊಂಡಿದ್ದರು. ಈಗ ಅವರ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ ಎಂದು ಕಿಡಿಕಾರಿದ್ದಾರೆ

.ರಾಷ್ಟ್ರೀಯ ನಾಯಕರ ಆಶೀರ್ವಾದ, ರಾಜ್ಯ ನಾಯಕರ ಸಹಕಾರದಿಂದ ಸೈಕಲ್, ಬಸ್​ನಲ್ಲಿ ಓಡಾಡಿ ಬಿಎಸ್​ಯಡಿಯೂರಪ್ಪ ಪಕ್ಷ ಸಂಘಟನೆ ಮಾಡಿದ್ದಾರೆ. ಯಡಿಯೂರಪ್ಪ ರಾಜಕಾರಣಕ್ಕೆ ಬಂದಾಗ ನೀನು ಕಣ್ಣು ಬಿಟ್ಟಿದ್ದೇನಪ್ಪ? ಬಿಎಸ್​ವೈರಂತೆ ವಿಜಯೇಂದ್ರ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿಲ್ವಾ? ಉಪ ಚುನಾವಣೆಯಲ್ಲಿ ವಿಜಯೇಂದ್ರ ಸಾಮರ್ಥ್ಯ ತೋರಿಸಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಇನ್ನೂ 30 ವರ್ಷದ ಬಗ್ಗೆ ಯೋಚನೆ ಮಾಡಿ ಹೈಕಮಾಂಡ್ ವಿಜಯೇಂದ್ರಗೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 17 ಕ್ಷೇತ್ರಗಳಲ್ಲಿ ಗೆದ್ದೆವು. ಮುಡಾ ಹಗರಣ ಬೆಳಕಿಗೆ ತಂದಿದ್ದು ವಿಜಯೇಂದ್ರ. ನೀವು ಏನ್ ಬೇಕಾದರೂ ಮಾಡಿ ವಿಜಯೇಂದ್ರ ವರ್ಚಸ್ಸು ಕುಗ್ಗುವುದಿಲ್ಲ. ಬಿಎಸ್ ಯಡಿಯೂರಪ್ಪ ಅನೇಕ ಬಾರಿ ಜೈಲಿಗೆ ಹೋಗಿದರೂ ಹೋರಾಟ ಮಾಡಿದ್ದರು. ಅವರ ಹೋರಾಟದ ಫಲವಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಎಂದು ಹೇಳಿದ್ದಾರೆ.

ಇನ್ನು ಯತ್ನಾಳ್ ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಹೋದಲ್ಲಿ ಬಂದಲ್ಲಿ ಮಾತಾಡುತ್ತಿದ್ದಾರೆ. ಕೆಲವರು ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸ ಮಾಡುತ್ತಿದ್ದಾರೆ. ಇಲ್ಲೇ ಇರುವ ಕೆಲವರು ಯತ್ನಾಳ್​ರನ್ನು ಎತ್ತಿಕಟ್ಟುತ್ತಿದ್ದಾರೆಂದು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ