Breaking News

ಜ. 21ರಂದು ಬೆಳಗಾವಿಯಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

Spread the love

ಬೆಳಗಾವಿ (ಜನವರಿ.20): ಗಾಂಧಿ ಭಾರತ ಸಮಾವೇಶ ಹಿನ್ನೆಲೆಯಲ್ಲಿ ನಾಳೆ ಅಂದರೆ ಜನವರಿ 21ರಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷಾ ದೃಷ್ಟಿಯಿಂದ ನಾಳೆ ಬೆಳಗಾವಿ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಜ. 21ರಂದು ಬೆಳಗಾವಿಯಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

ಬೆಳಗಾವಿ ಸುವರ್ಣ ಸೌಧದ ಬಳಿ ಗಾಂಧಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ದೇಶದ ವಿವಿಧ ಗಣ್ಯರು, ಸ್ವಾತಂತ್ರ್ಯ ಹೋರಾಟಗಾರರು, ಸಾರ್ವಜನಿಕರು, ಮಹಿಳೆಯರು ಹಾಗೂ ವೃದ್ಧರು ಸೇರಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. ಅಲ್ಲದೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿದ್ದು, ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ತಾಲೂಕು ಶೈಕ್ಷಣಿಕ ವಲಯದ ಶಾಲೆಗಳಿಗೆ ರಜೆ ಘೋಷಣೆ ಮಾಡುವಂತೆ ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲನೆ ಮಾಡಿದ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ರಜೆ ನೀಡಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಆದೇಶದಲ್ಲೇನಿದೆ?

ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ’ ಸಮಾರಂಭದ ಪ್ರಯುಕ್ತ ಲಕ್ಷಾಂತರ ಜನ ಭಾಗವಹಿಸುವ ಸಂಭವವಿರುತ್ತದೆ. ಅಲ್ಲದೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿರುವ ಕಾರಣ ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮ ಕೈಗೊಳ್ಳುವ ಅಗತ್ಯವಿದೆ


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ