Breaking News

ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ

Spread the love

ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸ್ಮರಣಾರ್ಥವಾಗಿ, ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ರಾಷ್ಟ್ರಪಿತ ಗಾಂಧಿಯವರ ಪ್ರತಿಮೆಯನ್ನು ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಿದರು.

ಈ ವೇಳೆ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್, ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪಸಿಂಗ್ ಸುರ್ಜೆವಾಲಾ, ಶ್ರೀ ಕೆ. ಸಿ. ವೇಣುಗೋಪಾಲ್, ಸಚಿವರುಗಳಾದ ಶ್ರೀ @satish.jarkiholi , ಶ್ರೀ ಎಚ್.ಕೆ.ಪಾಟೀಲ, ಡಾ.ಜಿ.ಪರಮೇಶ್ವರ , ಉಪಸಭಾಧ್ಯಕ್ಷ ಶ್ರೀ ರುದ್ರಪ್ಪ ಲಮಾಣಿ, ಸಂಪುಟ ಸಹೋದ್ಯೋಗಿಗಳು, ಸಂಸದರು, ಶಾಸಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ರೈತರು ಉಪಸ್ಥಿತರಿದ್ದರು.
#ಗಾಂಧಿಭಾರತ #gandhibharat


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ