Breaking News

ಬಸವೇಶ್ವರ ಏತ ನೀರಾವರಿ ಶೀಘ್ರ ಪೂರ್ಣ,ಅಥಣಿ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಸೂಚನೆ :ಸಚಿವ ಸತೀಶ್ ಜಾರಕಿಹೊಳಿ

Spread the love

ಬಸವೇಶ್ವರ ಏತ ನೀರಾವರಿ ಶೀಘ್ರ ಪೂರ್ಣ: “ಅನೇಕ ವರ್ಷಗಳಿಂದ ಆಮೆ ಗತಿಯಲ್ಲಿ ಸಾಗುತ್ತಿರುವ ಬಹು ನಿರೀಕ್ಷಿತ ಬಸವೇಶ್ವರ ಏತ ನೀರಾವರಿ ಯೋಜನೆಯು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು. ಈಗಾಗಲೇ ಶೇ 80ರಷ್ಟು ಅನುದಾನ ನೀಡಲಾಗಿದೆ. ಕೇವಲ ಶೇ 20 ರಷ್ಟು ಬಾಕಿಯಿದೆ. ಬೋರ್ಡ್ ಮೀಟಿಂಗ್ ನಡೆದ ಬಳಿಕ ಇನ್ನುಳಿದ ಅನುದಾನ ಒದಗಿಸಿ ತ್ವರಿತವಾಗಿ ಆ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದರು.

“ಇದೇ ವಿಚಾರಕ್ಕೆ ಶಾಸಕ ರಾಜು ಕಾಗೆ ಕೂಡ ಪದೇ ಪದೇ ನಮಗೆ ಹೇಳಿದ್ದಾರೆ. ಅದಕ್ಕಾಗಿ 200 ಕೋಟಿ ರೂಪಾಯಿಗಳಷ್ಟು ಹಣ ನೀಡಲಾಗಿದೆ. ಆ ಯೋಜನೆ ಆದಷ್ಟು ಬೇಗನೆ ಮುಗಿಯಬೇಕಿದೆ ಅನ್ನೋದು ನನ್ನ ಬಯಕೆ ಇದಕ್ಕಾಗಿ ನಾನು ಶ್ರಮಿಸುತ್ತೇನೆ” ಎಂದು ಹೇಳಿದರು.

ಅಥಣಿಯಲ್ಲಿ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡುವೆ: “ಅಥಣಿ ಪಟ್ಟಣದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯ ಆರೋಪಿಗಳು ಕೇಳಿ ಬರುತ್ತಿವೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೇರಿದಂತೆ ಸ್ಥಳೀಯ ತಹಸೀಲ್ದಾರ್ ಅವರಿಗೆ ಸೂಚನೆ ನೀಡುತ್ತೇನೆ. ಯಾರೇ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರೆ ನಿರ್ದಾಕ್ಷಿಣ್ಯ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಸಿದರು.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ