ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯುವ ಮತ್ತು ಸಿರಿಧಾನ್ಯ -2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಿಸಿಎಂ ಡಿ. ಕೆ. ಶಿವಕುಮಾರ್, ಜಾರ್ಖಂಡ್ ರಾಜ್ಯದ ಕೃಷಿ ಸಚಿವೆ ಶಿಲ್ಪಿ ನೇಹಾ ಟಿರ್ಕೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಭೈರೇಗೌಡ, ಭೈರತಿ ಸುರೇಶ್ ಉಪಸ್ಥಿತರಿದ್ದರು. ನಂತರ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.