Breaking News

ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ಮನೆ ಮುಂದೆ ಪತಿ ಆತ್ಮಹತ್ಯೆ

Spread the love

ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ಮನೆ ಮುಂದೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಮಂಜುನಾಥ್​​ (39) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಎನ್​ಜಿಇಎಫ್​​ ಬಡಾವಣೆಯಲ್ಲಿ ವಾಸವಾಗಿದ್ದ ಪತ್ನಿ ನಯನರಾಜ್ ಮನೆ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಮೃತನ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು ಮೂಲದ ಮಂಜುನಾಥ್ ಕ್ಯಾಬ್ ಚಾಲಕನಾಗಿದ್ದು, ಪತ್ನಿ ನಯನರಾಜ್ ಮೇಕಪ್ ಆರ್ಟಿಸ್ಟ್ ಆಗಿದ್ದಾರೆ. 2013ರಲ್ಲಿ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಇಬ್ಬರು ಧರ್ಮಸ್ಥಳದಲ್ಲಿ ವಿವಾಹ ಮಾಡಿಕೊಂಡಿದ್ದರು. ದಂಪತಿಗೆ 9 ವರ್ಷದ ಮಗನಿದ್ದು, 2016 ರಿಂದ ಎನ್​ಜಿಇಎಫ್ ಬಡಾವಣೆಯ ಅಪಾರ್ಟ್​ಮೆಂಟ್​ವೊಂದರಲ್ಲಿ ವಾಸಿಸುತ್ತಿದ್ದರು.
 ಕೌಟುಂಬಿಕ ಕಲಹ ಹಿನ್ನೆಲೆ 2022 ರಿಂದ ಇಬ್ಬರು ದೂರವಾಗಿದ್ದರು. 2023ರಲ್ಲಿ ವಿಚ್ಛೇದನ ಕೋರಿ ನಯನಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಮಂಜುನಾಥ್ ಪತ್ನಿ ಮನೆಗೆ ಹೋಗಿ ಇನ್ಮುಂದೆ ಜಗಳ ಮಾಡುವುದಿಲ್ಲ. ಒಟ್ಟಿಗಿದ್ದು ಚೆನ್ನಾಗಿ ನೋಡಿಕೊಳ್ಳುತ್ತೇನೆ, ತನ್ನೊಂದಿಗೆ ಬರುವಂತೆ ಪತ್ನಿಗೆ ವಿನಂತಿಸಿದ್ದ. ಆದರೆ ಪತ್ನಿ ನಿರಾಕರಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ