Breaking News

ಬೃಹತ್​ ಅಡುಗೆ ಮನೆಯಲ್ಲಿ ಅಡುಗೆ ಒಲೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಶನಿವಾರ ಸುತ್ತೂರು ಶ್ರೀಗಳು ಸುತ್ತೂರು ಜಾತ್ರ ಮಹೋತ್ಸವದ ಮಹಾ ದಾಸೋಹಕ್ಕೆ ಚಾಲನೆ ನೀಡಿದರು.

Spread the love

ಮೈಸೂರು: ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳು ಶನಿವಾರ ಚಾಲನೆ ನೀಡಿದರು. ಬೃಹತ್​ ಅಡುಗೆ ಮನೆಯಲ್ಲಿ ಅಡುಗೆ ಒಲೆಗಳಿಗೆ ಪೂಜೆ ಸಲ್ಲಿಸಿ, ದೊಡ್ಡ ದೊಡ್ಡ ಪಾತ್ರೆಗಳಿಗೆ ಅಡುಗೆ ಪದಾರ್ಥ ಹಾಕುವ ಮೂಲಕ ಚಾಲನೆ ನೀಡಲಾಯಿತು. ವಿಶೇಷವೆಂದ್ರೆ ದೊಡ್ಡ ದೊಡ್ಡ ಅಡುಗೆ ಒಲೆಗಳಿಗೆ ಹಚ್ಚುವ ಬೆಂಕಿ ಒಂದು ವಾರಗಳ ಕಾಲ ಆರದೇ ಇರುವುದು ತ್ರಿಕಾಲ ಮಹಾ ದಾಸೋಹದ ವಿಶೇಷ.

ಸುತ್ತೂರು ಜಾತ್ರೆ ಮಹಾ ದಾಸೋಹಕ್ಕೆ 1 ಸಾವಿರ ಕ್ವಿಂಟಾಲ್​ ಅಕ್ಕಿ, 250 ಕ್ವಿಂಟಾಲ್​ ಬೇಳೆ, 200 ಕ್ವಿಂಟಾಲ್​ ಸಕ್ಕರೆ, 1,500 ಸಾವಿರ ಟಿನ್​ ಅಡುಗೆ ಎಣ್ಣೆ, 10 ಸಾವಿರ ಕೆಜಿ ತುಪ್ಪ, ಸಾವಿರಾರು ಕ್ವಿಂಟಾಲ್​ ತರಕಾರಿ ಸೇರಿದಂತೆ ಅಡುಗೆ ಸಾಮಗ್ರಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಬಗೆಬಗೆಯ ಸಿಹಿ ಸೇರಿದಂತೆ ಲಕ್ಷಾಂತರ ಮಂದಿಗೆ ತ್ರಿಕಾಲ ದಾಸೋಹ ವ್ಯವಸ್ಥೆಗೆ ಚಾಲನೆ ನೀಡಲಾಯಿತು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ