Breaking News

ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ಆರ್‌.ಅಶೋಕ

Spread the love

ಸರ್ಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್‌ನ ಮೊರೆ ಹೋದ ಜನರು, ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಾಲ ಮನ್ನಾ ಮಾಡುತ್ತೇವೆಂದು ಮುಖ್ಯಮಂತ್ರಿ ಹೇಳಿದ್ದರಿಂದಲೇ ಸಮಸ್ಯೆ

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು.

2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ. ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 60 ಕೋಟಿ ರೂ. ನೀಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದಿಂದ ಹಣ ಫ್ರೀಜ್ ಆಗಿದೆ.

ನಿಗಮಗಳಿಗೆ 1,700 ಕೋಟಿ ರೂ. ನೀಡಬೇಕಿದ್ದು, 643 ಕೋಟಿ ರೂ. ನೀಡಲಾಗಿದೆ. ಅಂದರೆ ಎಲ್ಲ‌ ನಿಗಮಗಳಿಗೆ ಒಟ್ಟು 1,055 ಕೋಟಿ ರೂ. ಕೊರತೆಯಾಗಿದೆ. ಈ ಹಣದಲ್ಲಿ ಜನರಿಗೆ ಸಾಲ ನೀಡಬಹುದಿತ್ತು. ಕೊರತೆಯಾದ ಹಣವನ್ನು ಸಾಲವಾಗಿ ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿವೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ