Breaking News

ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

Spread the love

ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ.

ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಹೀಗಾಗಿ ಇಂದು ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸರ್ಕಾರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಫೆ.10ರೊಳಗೆ ಸುತ್ತೋಲೆ ಹೊರಡಿಸಿ ಗರಿಷ್ಠ ಮೂರು ತಿಂಗಳ ಒಳಗೆ ಅಭಿಯಾನ ಮಾದರಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಬಿ-ಖಾತಾ ಮಾಡಿಕೊಡಬೇಕು ಎಂದು ಸೂಚಿಸಲಾಗಿದೆ ಎಂದರು.

ಅನದೀಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಇದೀಗ ನಾವು ಅದನ್ನು ಪಾಲಿಸಲೇಕಾದ ತುರ್ತು ಎದುರಾಗಿದೆ. ಹೀಗಾಗಿ ಎಷ್ಟು ನಿವೇಶನ ಇವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಇದಾದ ಮೇಲೆ ರಾಜ್ಯದಲ್ಲಿ ಬಿ-ಖಾತಾ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿಅನದೀಕೃತ ನಿವೇಶನಗಳಿಗೆ ಅವಕಾಶವೇ ಇಲ್ಲ.

ನಗರ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇದೇ ಮಾದರಿಯನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ