Breaking News

ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ, ತೊಂದರೆ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ

Spread the love

ಬೆಂಗಳೂರು: “ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ, ತೊಂದರೆ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್​ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೂರು ಬಂದ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸುಮೋಟೊ ದಾಖಲಿಸುವಂತೆಯೂ ತಿಳಿಸಲಾಗಿದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ತಡೆಯಲು ಕಾನೂನು ರೂಪಿಸಲಾಗುತ್ತಿದೆ. ಕಾನೂನು ಸಚಿವರು ಹಾಗೂ ಕಂದಾಯ ಸಚಿವರೊಂದಿಗೆ ಸಭೆ ಕರೆಯಲಾಗಿದೆ‌.

ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು ಎಂಬ ನಿಟ್ಟಿನಲ್ಲಿ ಕಾನೂನು ರೂಪಿಸಲಾಗುತ್ತಿದೆ. ಸಹಾಯವಾಣಿ ಆರಂಭಿಸಲಾಗುವುದು. ಸಭೆಯಲ್ಲಿ ಅಂತಿಮವಾದರೆ ನಾಳೆ ಕ್ಯಾಬಿನೆಟ್ ಮುಂದೆ ತರುತ್ತೇವೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ