Breaking News

ದ್ವಿಚಕ್ರ ವಾಹನ ಕಾರಿಗೆ ಟಚ್ ಆಗಿದ್ದಕ್ಕೆ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ

Spread the love

ಬೆಂಗಳೂರು : ದ್ವಿಚಕ್ರ ವಾಹನ ಕಾರಿಗೆ ಟಚ್ ಆಗಿದ್ದಕ್ಕೆ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜನವರಿ 9ರಂದು ಸುಬ್ರಹ್ಮಣ್ಯ ನಗರ ಠಾಣೆ ವ್ಯಾಪ್ತಿಯ ಮಿಲ್ಕ್ ಕಾಲೋನಿ ರಸ್ತೆಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾರು ಚಾಲಕ ಸೇರಿದಂತೆ ಮೂವರಿಂದ ಹಲ್ಲೆಗೊಳಗಾದ ಭರತ್ (25) ಎಂಬ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ತಾನು ರಿಕವರಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದು, ಜನವರಿ 9ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುವಾಗ ತನ್ನ ದ್ವಿಚಕ್ರ ವಾಹನ ಕಾರೊಂದಕ್ಕೆ ಟಚ್ ಆಗಿದೆ. ಆ ಸಂದರ್ಭದಲ್ಲಿ ಸಿಟ್ಟಿಗೆದ್ದ ಕಾರು ಚಾಲಕ ಹಾಗೂ ಆತನ ಜೊತೆಗಿದ್ದವರು, ತನ್ನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಸ್ಥಳಕ್ಕೆ ಬಂದ ಪೊಲೀಸರ ಮೇಲೆಯೂ ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದಾರೆ

ಎಂದು ಆರೋಪಿಸಿ ಯುವಕ ಭರತ್ ದೂರು ನೀಡಿದ್ದಾರೆ. ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿನ ಸೆರೆಯಾಗಿದೆ. ಗಾಯಾಳು ಭರತ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.ಭರತ್ ನೀಡಿರುವ ದೂರಿನ ಅನ್ವಯ ಆರೋಪಿಗಳ ವಿರುದ್ಧ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರನ್ನ ಗುರುತಿಸಲಾಗಿದ್ದು, ಆದಷ್ಟು ಬೇಗ ಬಂಧಿಸಲಿದ್ದೇವೆ ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ