Breaking News

ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

Spread the love

ಮೈಸೂರು: ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಮೈಸೂರು ಅರಣ್ಯ ಭವನದಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಾಗಿ ಕಾಡಿನಂಚಿನಲ್ಲಿ ಬಿದಿರು ಬೆಳೆಸುವುದು ಮತ್ತು ಅರಣ್ಯದೊಳಗಿನ ನೀರು ಗುಂಡಿಗಳು ಬತ್ತದಂತೆ ಸೌರ ಪಂಪ್ ಸೆಟ್ ಮೂಲಕ ಕೊಳವೆ ಬಾವಿಗಳಿಂದ ನೀರು ಹರಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಬೇಸಿಗೆಯಲ್ಲಿ ಕಾಡ್ಗಿಚ್ಚು ಅರಣ್ಯ ನಾಶಕ್ಕೆ ಕಾರಣವಾಗುತ್ತದೆ. ಹೀಗಾಗಿ ಬರುವ ಬೇಸಿಗೆಯಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮತ್ತು ಕಾಡ್ಗಿಚ್ಚು ಕಾಣಿಸಿಕೊಂಡರೆ ಕೂಡಲೇ ನಂದಿಸಲು ಅಗ್ನಿಶಾಮಕ ಉಪಕರಣಗಳ ಸುಸ್ಥಿತಿಯನ್ನು ಖಾತ್ರಿಪಡಿಸಿಕೊಂಡು, ಸಿಬ್ಬಂದಿ ಸನ್ನದ್ಧವಾಗಿರುವಂತೆ ನಿರ್ದೇಶಿಸಲು ಸಚಿವರು ಸೂಚಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ