Breaking News

ಕುಂಭಮೇಳ; ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿಗಳು ಸೂಚಿಸಿದ್ದಾರೆ ಎಂದ HD ಕುಮಾರಸ್ವಾಮಿ

Spread the love

ಕನ್ನಡಿಗರು ಸಮಸ್ಯೆಯಲ್ಲಿದ್ದರೆ ದೆಹಲಿಯ ನನ್ನ ಕಚೇರಿಯನ್ನು ಸಂಪರ್ಕಿಸಿ ಎಂದ ಕೇಂದ್ರ ಸಚಿವರು
ಕುಂಭಮೇಳದ ಪುಣ್ಯಸ್ನಾನ ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ; ಹೆಚ್ಡಿಕೆ ಕಿಡಿ
ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಈ ಘಟನೆ ಎಲ್ಲರಿಗೂ ನೋವು ತಂದಿದೆ. ಇವತ್ತು ನಮ್ಮ ಹಿಂದೂ ಧರ್ಮದಲ್ಲಿ ಶ್ರೇಷ್ಠವಾದ ದಿನ ಎನ್ನುವ ಭಾವನೆ ಎಲ್ಲರಿಗೂ ಇದೆ. ಅದಕ್ಕಾಗಿ ಅಲ್ಲಿ ಪುಣ್ಯಸ್ನಾನ ಮಾಡಿದರೆ ಒಳ್ಳೆಯದು ಎನ್ನುವ ಭಾವನೆ ಜನರಲ್ಲಿದೆ. ಅದಕ್ಕಾಗಿ ದಾಖಲೆ ಪ್ರಮಾಣದಲ್ಲಿ ಜನ ಹೋಗಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನೂ ಸರಕಾರ ತೆಗೆದುಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರ ಜತೆ ಮಾತನಾಡಿದ್ದಾರೆ. ದೊಡ್ಡ ಮಟ್ಟದ ಮುಂಜಾಗ್ರತಾ ಕ್ರಮ ವಹಿಸಿ ಎಂದು ಯೋಗಿ ಆದಿತ್ಯನಾಥ್‌ ಅವರಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.
ಕುಂಭಮೇಳದಲ್ಲಿ ಅದ್ಭುತವಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದು ಸಮಸ್ಥೆಗೆ ಕಾರಣವಾಗಿದೆ. ಮೌನಿ ಅಮಾವಾಸ್ಯೆ ದಿನ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡುತ್ತಾರೆ. ಹೀಗಾಗಿ ಪರಿಸ್ಥಿತಿಯನ್ನು ನೋಡಿಕೊಂಡು ಬನ್ನಿ ಎಂದು ಕುಂಭಮೇಳ ಸಮಿತಿ ಜನತೆಗೆ ಮನವಿ ಮಾಡಿತ್ತು. ಆದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿರುವಾಗ ಈ ಘಟನೆ ನಡೆದಿದೆ ಎಂದು ಸಚಿವರು ನೋವು ವ್ಯಕ್ತಪಡಿಸಿದರು.

Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ