Breaking News

ಬೆಂಗಳೂರು, ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

Spread the love

ಬೆಂಗಳೂರು/ರಾಯಚೂರು/ಬೆಳಗಾವಿ: ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಹಾಗೂ ಬೆಳಗಾವಿಯ ಎರಡು ಸ್ಥಳಗಳು, ಚಿತ್ರದುರ್ಗ, ಬಾಗಲಕೋಟೆ, ರಾಯಚೂರು ಜಿಲ್ಲೆಯ ತಲಾ ಒಂದೊಂದು ಕಡೆಗಳಲ್ಲಿ ಬೆಳಗ್ಗೆಯಿಂದಲೇ ಅಧಿಕಾರಿಗಳು ಶೋಧ ಕಾರ್ಯದಲ್ಲಿದ್ದಾರೆ.

ಬೆಂಗಳೂರಿನ ಹೆಬ್ಬಾಳದಲ್ಲಿರುವ ಬಿಬಿಎಂಪಿ ವಲಯದ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್ ಅವರ ವಿದ್ಯಾರಣ್ಯಪುರದ ನಿವಾಸ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಡೆಪ್ಯುಟಿ ಸೆಕ್ರೆಟರಿ ಟಿ.ಕೆ.ರಮೇಶ್ ನಿವಾಸ, ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಶಿವಲಿಂಗಯ್ಯ ಹಿರೇಮಠ ಅವರ ನಿವಾಸ, ಬೆಳಗಾವಿ ಉತ್ತರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಸಚಿನ್ ಮಾಂಡೆದ್, ಬೆಳಗಾವಿಯ ರಾಯಭಾಗದ ವೆಟರ್ನರಿ ಇನ್ಸ್‌ಪೆಕ್ಟರ್ ಸಂಜಯ್ ಅಣ್ಣಪ್ಪ ದುರ್ಗಣ್ಣವರ್ ನಿವಾಸ ಸೇರಿ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.BAGALKOTE LOKAYUKTA RAID  LOKAYUKTA RAID ON BELAGAVI  RAICHUR  ಲೋಕಾಯುಕ್ತ ದಾಳಿ

ಬೆಂಗಳೂರು ಲೋಕಾಯುಕ್ತ ಎಸ್​​ಪಿ ಡಾ‌.ಕೆ.ವಂಶಿಕೃಷ್ಣ: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ 9 ತಂಡಗಳು ಇಂದು ಇಬ್ಬರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ಕೈಗೊಂಡಿವೆ. ಬಿಬಿಎಂಪಿ ಹೆಬ್ಬಾಳ ಉಪ ವಿಭಾಗದ ಎಇಇ ಮಾಧವ ರಾವ್ ಅವರ ಮನೆ ಸೇರಿದಂತೆ ಎರಡು ಸ್ಥಳಗಳಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಡೆಪ್ಯುಟಿ ಸೆಕ್ರೆಟರಿ ಟಿ.ಕೆ ರಮೇಶ್ ಅವರ ಮನೆ, ಶಾಲೆ, ಹುಲಿಯೂರು ದುರ್ಗದಲ್ಲಿರುವ ಜಮೀನು ಸೇರಿದಂತೆ ನಾಲ್ಕು ಕಡೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ದಾಖಲೆಗಳ ಪರಿಶೀಲನೆ ಮುಂದುವರೆದಿದೆ ಎಂದು‌ ಲೋಕಾಯುಕ್ತ ಎಸ್.ಪಿ ಡಾ.ಕೆ ವಂಸಿಕೃಷ್ಣ ಮಾಹಿತಿ ನೀಡಿದ್ದಾರೆ.

ಜಿ.ಪಂ.ಲೆಕ್ಕಪತ್ರ ಸಹಾಯಕ ಅಧಿಕಾರಿ ಮೇಲೆ ದಾಳಿ: ರಾಯಚೂರು ಜಿ.ಪಂ.ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಗುಜ್ಜರ್​ ಅವರ ರಾಯಚೂರಿನ ಜವಾರ್ ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಗಾವಿಯ ಇಬ್ಬರು ಅಧಿಕಾರಿಗಳಿಗೆ ಶಾಕ್: ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚಿನ್ ಮಂಡೇದ, ರಾಯಬಾಗ ಪಶು ವೈದ್ಯಾಧಿಕಾರಿ ಸಂಜಯ ದುರ್ಗನ್ನವರ ಮನೆ ಮೇಲೆ ದಾಳಿ ಮಾಡಲಾಗಿದೆ. ಅನಗೋಳ, ಹಾರೋಗೇರಿ,‌ ಬೆಲ್ಲದ ಬಾಗೇವಾಡಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆದಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ