Breaking News

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

Spread the love

ಬೆಂಗಳೂರು: ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಹೆಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಿರಣ್ ಅಲಿಯಾಸ್ ಸೈಕೋ ಕಿರಣ್ (21) ಬಂಧಿತ ಆರೋಪಿ. ಪ್ರೊಕ್ಲಮೇಷನ್ ಹಾಗೂ ವಾರೆಂಟ್‌ಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ಶುಕ್ರವಾರ ಹೆಚ್ಎಎಲ್‌ ಠಾಣೆ ಪೊಲೀಸರ ತಂಡ ತೆರಳಿತ್ತು. ಪೊಲೀಸರ ಮೇಲೆ ಡ್ರ್ಯಾಗರ್‌ನಿಂದ ಹಲ್ಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಘಟನೆಯಲ್ಲಿ ಎಚ್ಎಎಲ್ ಠಾಣೆಯ ನಾಲ್ವರು ಸಿಬ್ಬಂದಿಗೆ ಗಾಯಗಳಾಗಿದ್ದವು ವರದಿಯಾಗಿದೆ.

ಬಳಿಕ ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯ ನ್ಯೂ ತಿಪ್ಪಸಂದ್ರ ಬಳಿಯಿದ್ದ ಆರೋಪಿಯನ್ನು ಬಂಧಿಸಲು ಹೆಚ್ಎಎಲ್ ಠಾಣೆ ಪೊಲೀಸರು ತೆರಳಿದ್ದರು. ಆ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡಲು ಪ್ರಯತ್ನಿಸಿದಾಗ, ಹೆಚ್ಎಎಲ್ ಠಾಣೆ ಇನ್ಸ್‌ಪೆಕ್ಟರ್ ಅಜರುದ್ದೀನ್ ಆರೋಪಿಗೆ ಶರಣಾಗುವಂತೆ ಸೂಚಿಸಿದ್ದೆವು. ಆದ್ರೆ ಆತ ಮತ್ತೆ ನಮ್ಮ ಮೇಲೆ ಹಲ್ಲೆಗೆ ಮುಂದಾದಾಗ ಗಾಳಿಯಲ್ಲಿ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ