Breaking News

ಮಾಸ್ಕ್, ಸಾಮಾಜಿಕ ಅಂತರ ನಿಯಮ ಉಲ್ಲಂಘನೆ- ಬೆಂಗ್ಳೂರಲ್ಲಿ ಒಂದೇ ದಿನ 2.64 ಲಕ್ಷ ರೂ. ದಂಡ ಸಂಗ್ರಹ

Spread the love

ಬೆಂಗಳೂರು: ಕೊರೊನಾ ಒಕ್ಕರಿಸಿದಾಗಿನಿಂದ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಸಾರಿ ಸಾರಿ ಹೇಳಲಾಗುತ್ತಿದೆ. ಆದರೆ ಜನ ಮಾತ್ರ ಡೋಂಟ್ ಕೇರ್ ಎನ್ನುವಂತೆ ವರ್ತಿಸಿದ್ದು, ಇದಕ್ಕೆ ಪ್ರತಿಯಾಗಿ ಬಿಬಿಎಂಪಿ ಸಹ ದಂಡ ಹಾಕುತ್ತಿದೆ.

ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದೆ ಇರುವವರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಜೂನ್ 25 ರಂದು 2.64 ಲಕ್ಷ ರೂ. ದಂಡ ಸಂಗ್ರಹವಾಗಿದೆ. ಮಾಸ್ಕ್ ಧರಿಸದಿರುವ ಒಟ್ಟು 1,268 ಜನರಿಂದ 2.53 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದ 52 ಜನರಿಗೆ 10,400 ರೂ.ದಂಡ ವಿಧಿಸಲಾಗಿದೆ. ನಿಯಮ ಉಲ್ಲಂಘಿಸಿದ ಒಟ್ಟು 1320 ಜನರಿಗೆ 2.64 ಲಕ್ಷ ರೂ. ದಂಡ ವಿಧಿಸಲಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಾಗೂ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಒಡಾಡುವವರಿಗೆ ಬಿಬಿಎಂಪಿ ನೇಮಿಸಿದ್ದ ಮಾರ್ಷಲ್ ಗಳು ದಂಡ ಸಂಗ್ರಹ ಮಾಡಿದ್ದಾರೆ.

ರಾಜ್ಯದಲ್ಲಿ ಇಂದು ಒಂದೇ ದಿನ 442 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆಯಾಗಿದೆ. ಇಂದು ಒಟ್ಟು 6 ಮಂದಿ ಮೃತಪಟ್ಟಿದ್ದು, ಒಟ್ಟು 519 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅತಿ ಹೆಚ್ಚು ಪ್ರಕರಣ ಎಂದಿನಂತೆ ಬೆಂಗಳೂರಿನಲ್ಲಿ ಕಂಡು ಬಂದಿದ್ದು, 113 ಮಂದಿಗೆ ಸೋಂಕು ಬಂದಿದೆ. 81 ಅಂತರಾಜ್ಯ ಪ್ರಯಾಣಿಕರಿಗೆ ಸೋಂಕು ಬಂದಿದ್ದರೆ, 23 ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸೋಂಕು ಬಂದಿದೆ.


Spread the love

About Laxminews 24x7

Check Also

ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ!

Spread the love ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ