Breaking News

ನಿಂತುಹೋಗಿದ್ದ ಪ್ರಶಸ್ತಿಗಳಿಗೆ ಮರುಜೀವ

Spread the love

 

ಈ ಹಿಂದಿನ ಸರ್ಕಾರ ಪ್ರತಿಷ್ಠಿತ ಟಿಎಸ್ಆರ್ ಪ್ರಶಸ್ತಿ, ಮೊಹರೆ ಹನುಮಂತರಾಯ ಪ್ರಶಸ್ತಿ, ಪರಿಸರ ಪತ್ರಿಕಾ ಪರಿಷತ್ ನೀಡುವ ಪ್ರಶಸ್ತಿಯನ್ನು ಅನೇಕ ವರ್ಷಗಳಿಂದ ನೀಡಿಲ್ಲ. ಅವರನ್ನು ಟೀಕಿಸಿ ಯಾವುದೇ ಪ್ರಯೋಜನವಿಲ್ಲ. ನಮ್ಮ ಸರ್ಕಾರ ಮತ್ತೇ ಇದಕ್ಕೆ ಜೀವ ನೀಡಿದೆ. ರಘುರಾಮ್ ಶೆಟ್ಟಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕು ಎಂಬ ಬೇಡಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪ್ರಶಸ್ತಿ ಮೊತ್ತವನ್ನು ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಹೇಳಿದರು.

“ನೀವು ಸತ್ಯವನ್ನು ಬರೆಯಬಹುದು, ಸತ್ಯವನ್ನು ನುಡಿಯಬಹುದು, ಸತ್ಯಕ್ಕೆ ಗೌರವಿಸುವುದು ಪತ್ರಕರ್ತರು ಹಾಗೂ ರಾಜಕಾರಣಿಗಳ ಕರ್ತವ್ಯ. “ಜನಸೇವೆ ಮತ್ತು ದೇಶಸೇವೆ ಪತ್ರಿಕೋದ್ಯಮದ ಏಕೈಕ ಗುರಿ ಎಂಬ ಮಹಾತ್ಮಾ ಗಾಂಧೀಜಿ ಅವರ ಹೇಳಿಕೆಯನ್ನು ಅಕಾಡೆಮಿಯ ಅಧ್ಯಕ್ಷರು ತಿಳಿಸಿದರು. ನಮ್ಮ ಸರ್ಕಾರ ಕೂಡ ಮಹಾತ್ಮಾ ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ನಡೆಸಿದ್ದೇವೆ. ಇಂದಿನ ಕಾರ್ಯಕ್ರಮದಲ್ಲಿ ಪತ್ರಕರ್ತರ ಜತೆಗೆ ಅವರ ಕುಟುಂಬದವರನ್ನು ಭೇಟಿ ಮಾಡುತ್ತಿರುವುದು ಸಂತೋಷದ ವಿಚಾರ” ಎಂದರು.

“ಮಾಧ್ಯಮಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಸರ್ಕಾರ ಬದಲಿಸುವ, ನಾಯಕರನ್ನು ಬೆಳೆಸುವ ಮಾಧ್ಯಮಗಳ ಶಕ್ತಿಯನ್ನು ನಾವು ನೋಡಿದ್ದೇವೆ. ಆದರೆ ಸುಳ್ಳು ಸುದ್ದಿ ಎಂಬುದನ್ನು ನೀವು ಯಾವ ರೀತಿ ನಿಯಂತ್ರಿಸುತ್ತೀರಿ ಎಂಬುದು ಮುಖ್ಯ. ಇತ್ತೀಚೆಗೆ ಮಾಧ್ಯಮಗಳ ಪರಿಸ್ಥಿತಿ ನೋಡಿ ನನ್ನ ಮಗಳು ನಮ್ಮ ಶಿಕ್ಷಣ ಸಂಸ್ಥೆಯಲ್ಲೇ ಮಾಧ್ಯಮ ನಿರ್ವಹಣೆ ಕೋರ್ಸು ಆರಂಭಿಸಬೇಕು ಎಂದು ಚರ್ಚೆ ಮಾಡಿದ್ದಾಳೆ. ಈ ವರ್ಷದಿಂದ ನಮ್ಮ ಸಂಸ್ಥೆಯಲ್ಲೂ ಸಮೂಹ ಸಂವಹನ ಪತ್ರಿಕೋದ್ಯಮ ಕೋರ್ಸ್ ಆರಂಭಿಸಲಾಗುವುದು” ಎಂದರು.

“ಪತ್ರಕರ್ತರು ಬಲಿಷ್ಠವಾಗಬೇಕು. ನೀವು ಬಲಿಷ್ಠವಾದರೆ ನಾವು ಬಲಿಷ್ಠರಾಗುತ್ತೇವೆ. ನಾವು ಬಲಿಷ್ಠವಾಗಿದ್ದರೆ, ನೀವು ಬಲಿಷ್ಠವಾಗಿರುತ್ತೀರಿ. ನಾವು ರಾಜ್ಯದ ಆರ್ಥಿಕ ಪರಿಸ್ಥಿತಿ ನೋಡಿಕೊಂಡೆ ಐದು ಗ್ಯಾರಂಟಿ ಯೋಜನೆ ನೀಡಿದ್ದೇವೆ. ಬೆಲೆ ಏರಿಕೆ ಮಧ್ಯೆ ಜನರಿಗೆ ನೆರವಾಗಲು ದಿಟ್ಟ ತೀರ್ಮಾನ ಮಾಡಿ ₹56 ಸಾವಿರ ಕೋಟಿ ನೀಡುತ್ತಿದ್ದೇವೆ. ನಮ್ಮ ಯೋಜನೆ ನೋಡಿ ಲೇವಡಿ, ಟೀಕೆ ಮಾಡಿದರು. ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ಕಾರ್ಯಕ್ರಮ ರೂಪಿಸಿದ್ದೇವೆ. ವಿರೋಧ ಪಕ್ಷದವರು ನಮ್ಮ ಯೋಜನೆ ಟೀಕಿಸಿ, ಬೇರೆ ರಾಜ್ಯಗಳಲ್ಲಿ ನಮಗಿಂತ ಮೊದಲೇ ಇಂತಹ ಯೋಜನೆ ಘೋಷಿಸುತ್ತಿದ್ದಾರೆ” ಎಂದು ಹೇಳಿದರು.

“ಜನರ ಬದುಕಿನಲ್ಲಿ ಸಹಾಯ ಮಾಡಿ, ಸಾಮಾಜಿಕ ಭದ್ರತೆ ಕಾಪಾಡಲು ನಮ್ಮ ಸರ್ಕಾರ ಮುಂದಾಗಿದೆ. ಮಾಧ್ಯಮಗಳು ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆ ಬಾರದ ರೀತಿ ಕಾರ್ಯ ನಿರ್ವಹಿಸಬೇಕು. ಕರ್ನಾಟಕ ಹಾಗೂ ಬೆಂಗಳೂರಿಗೆ ವಿಶೇಷವಾದ ಶಕ್ತಿ ಇದ್ದು, ಉತ್ತಮವಾದ ಶಿಕ್ಷಣ, ಮಾನವ ಸಪನ್ಮೂಲದ ಗುಣಮಟ್ಟ ಇಲ್ಲಿದೆ. ಬೇರೆ ರಾಜ್ಯದ ಪ್ರತ್ರಕರ್ತರಿಗಿಂತ ನೀವು ಯಾವುದರಲ್ಲೂ ಕಡಿಮೆ ಇಲ್ಲ” ಎಂದರು.

“ಮಾಧ್ಯಮಗಳು ಈಗ ಪ್ರಾದೇಶಿಕವಾಗಿ ವಿಭಾಗಗಳಿವೆ. ಗ್ರಾಮೀಣ ಪ್ರದೇಶಗಳಲ್ಲೂ ಹೊಸ ಮಾಧ್ಯಮಗಳು ಶಕ್ತಿಶಾಲಿಯಾಗಿ ಬೆಳೆಯುತ್ತಿವೆ. ಹಳ್ಳಿಯಿಂದ ಬಂದ ನಾವು ಬೆಂಗಳೂರಿನಲ್ಲಿ ರಾಜಕಾರಣ ಮಾಡುವ ರೀತಿ, ನೀವು ಎಲ್ಲಿಂದಾದರೂ ಬಂದರೂ ನಿಮ್ಮ ಪ್ರತಿಭೆ ಮೂಲಕ ಯಾವ ಹಂತಕ್ಕೆ ಬೇಕಾದರೂ ಬೆಳೆಯಬಹುದು. ನಿಮ್ಮೆಲ್ಲರಿಗೂ ಶುಭವಾಗಲಿ, ನಿಮ್ಮ ಆಶೀರ್ವಾದ ನನ್ನ ಮೇಲೆ, ನಮ್ಮ ಸರ್ಕಾರದ ಮೇಲೆ ಇರಲಿ” ಎಂದು ತಿಳಿಸಿದರು.


Spread the love

About Laxminews 24x7

Check Also

ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆ

Spread the love ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಬೆಳಗಾವಿಯ ಗುಡಶೆಡ್ ರಸ್ತೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ