Breaking News

ಮಾನವಿಯಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Spread the love

ರಾಯಚೂರು: 7 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿಯಲ್ಲಿ ಬುಧವಾರ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್​ಪಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದಾರೆ.

ಮಾನವಿಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆೆ. ಆರೋಪಿ ಶಿವನಗೌಡ ಮತ್ತು ಖಾಸಗಿ ಶಾಲೆಯ ಆಡಳಿತ ಮಂಡಳಿಯವರನ್ನು ಬಂಧಿಸಲಾಗಿದೆ. ಆರೋಪಿ ಉದ್ದೇಶಪೂರ್ವಕವಾಗಿ ಕೃತ್ಯವೆಸಗಿದ್ದಾನೆ. ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್​ಪಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದಾರೆ.

ಬುಧವಾರ ಬಾಲಕಿಯನ್ನು ಖಾಸಗಿ ಶಾಲೆಯಿಂದ ಕರೆದೊಯ್ದು ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಮತ್ತು ಶಾಲೆಯ ಆಡಳಿತ ಮಂಡಳಿಯರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ