Breaking News

ಎಕ್ಸಲ್ ಕಟ್ ಆಗಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Spread the love

ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್‌ನ ಎಕ್ಸಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ 60ಕ್ಕೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮುದಗಲ್ ಬಳಿ ಜರುಗಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್​ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.

60ಕ್ಕೂ ಹೆಚ್ಚು ಪ್ರಯಾಣಿಕರನ್ನ ಹೊತ್ತುಕೊಂಡು ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಬಸ್ ಕಡೆ ತೆರಳುತ್ತಿತ್ತು. ಬಸ್​ನಲ್ಲಿ ಸುಮಾರ 33 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಸಂಚರಿಸಿದ್ದರು. ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್​ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಕಡೆ ಹೊರಟ್ಟಿದ್ದ ಮಾರ್ಗ ಮಧ್ಯೆ ಬಸ್​ನ ಎಕ್ಸಲ್ ಕಟ್ ಆಗಿರುವ ಪರಿಣಾಮ ಈ ಘಟನೆ ಎಂದು ಪ್ರಾಥಮಿಕವಾಗಿ ತಿಳಿದಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ