Breaking News

ಕರ್ನಾಟಕದಲ್ಲಿ ಕೂಡ ಕುಂಭಮೇಳ ಆರಂಭ

Spread the love

ಮೈಸೂರು, ಫೆಬ್ರವರಿ 09: ಉತ್ತರ ಪ್ರದೇಶದ ಪ್ರಯಾಗ್​ರಾಜ್​​ನಲ್ಲಿ 144 ವರ್ಷಗಳ ಬಳಿಕ ಪವಿತ್ರ ಕುಂಭಮೇಳ (Kumbh Mela) ನಡೆಯುತ್ತಿದೆ.

ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಇದೀಗ ಇತ್ತ ಕರ್ನಾಟಕದಲ್ಲಿ ಕೂಡ ಕುಂಭಮೇಳ ಆರಂಭವಾಗುತ್ತಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಅಂದರೆ ಫೆ. 10 ರಿಂದ 3 ದಿನಗಳ ಕಾಲ ಕುಂಭಮೇಳ ನಡೆಯಲಿದೆ.

ಮೂರು ವರ್ಷಕ್ಕೊಮ್ಮೆ ಜಿಲ್ಲೆಯ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಡಾ ಹೆಚ್. ಸಿ‌ ಮಹದೇವಪ್ಪ ಕುಂಭಮೇಳಕ್ಕೆ ಚಾಲನೆ ನೀಡಲಿದ್ದಾರೆ.

ಆದಿ ಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಸೇರಿ ಹಲವರು‌ ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

3.00 ಕೋಟಿ‌ ವೆಚ್ಚದಲ್ಲಿ ಮೇಖಳಿ-ಬೆಂಡವಾಡ ರಸ್ತೆ ಕಿಮೀ 12.00 ರಿಂದ 15.69ರ ವರೆಗೆ ರಸ್ತೆ ಅಗಲೀಕರಣ,

Spread the love ಚಿಕ್ಕೋಡಿ ಲೋಕಸಭೆಯ ರಾಯಬಾಗ ವಿಧಾನಸಭಾ ಕ್ಷೇತ್ರದ ಬೆಂಡವಾಡ ಗ್ರಾಮದಲ್ಲಿ ‌ಇಂದು ಲೋಕೋಪಯೋಗಿ ‌ಇಲಾಖೆಯ‌ ವತಿಯಿಂದ ಅಂದಾಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ