Breaking News

ವೈದ್ಯರ ಪತ್ನಿ ಒಬ್ಬರೇ ಇದ್ದ ವೇಳೆ ಮನೆಗೆ ನುಗ್ಗಿದ್ದ ಕಳ್ಳರು ಅವರ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಕದ್ದು ಪರಾರಿ

Spread the love

ಧಾರವಾಡ: ಶನಿವಾರ (ಫೆ. 8) ಹಾಡಹಗಲೇ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಅಶೋಕ್​ ಹೊಸಮನಿ, ಶಿವಕುಮಾರ್ ಕೋಕಾಟಿ, ಶಿವಾನಂದ ಕರಡಿಗುಡ್ಡ ಬಂಧಿತರು. ಆರೋಪಿಗಳಿಂದ ಮೂರು ಬೈಕ್ ಹಾಗೂ ಚಿನ್ನಾಭರಣ, ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ.

ಧಾರವಾಡ ಮಾಳಮಡ್ಡಿ ಬಡಾವಣೆಯಲ್ಲಿ ನಿನ್ನೆ ಡಾ. ಆನಂದ ಕಬ್ಬೂರ ಅವರು ಮನೆಯಲ್ಲಿಲ್ಲದ ವೇಳೆ ಕಳ್ಳರು ಅವರ ಪತ್ನಿ ವಿನೋದಿನಿ ಅವರು ಒಬ್ಬರೇ ಇದ್ದು, ಅವರ ಮೇಲೆ ಹಲ್ಲೆ ಮಾಡಿ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದರು. ಪ್ರಕರಣ ನಡೆದ ಕೇವಲ ಐದು ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿದ್ದಾರೆ.

“ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸ್ ಅಧಿಕಾರಿಗಳ ತಂಡ ತಕ್ಷಣ ಕಾರ್ಯಾಚರಣೆ ನಡೆಸಿ ಸಿಸಿಟಿವಿಯ‌ ಸಹಾಯದಿಂದ ಮೂರು ಜನರನ್ನು ರಾಯಾಪುರದಲ್ಲಿ ಬಂಧಿಸಿದ್ದಾರೆ‌. ಬಂಧನದ ವೇಳೆ ಆರೋಪಿಗಳು ಪೊಲೀಸರ‌ ಮೇಲೆಯೇ ಹಲ್ಲೆಗೆ ಯತ್ನಿಸಿದ್ದರು. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಕಳೆದ ವರ್ಷ ನಡೆದ ಕಳ್ಳತನವನ್ನು ಇದೇ ಕಳ್ಳರು ಮಾಡಿದ್ದು” ಎಂದು ಪೊಲೀಸ್​ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ