Breaking News

ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳವರೆಗೆ 13ನೇ ಕುಂಭಮೇಳ

Spread the love

ಮೈಸೂರು : ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳವರೆಗೆ 13ನೇ ಕುಂಭಮೇಳ ಜರುಗಲಿದೆ.

ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಇದಕ್ಕಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ.12 ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ.

ಅಂದು ಬೆಳಗ್ಗೆ 9 ರಿಂದ 9.30 ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಭರದ ಸಿದ್ಧತೆ : ಕುಂಭಮೇಳದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ವೇದಿಕೆ ನಿರ್ಮಾಣ, ಸ್ವಚ್ಛತೆ, ಲೈಟಿಂಗ್ಸ್ ಅಳವಡಿಕೆ ಕಾರ್ಯ ಮಾಡಲಾಗಿದೆ. ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗುತಜ್ಞರನ್ನು ನಿಯೋಜನೆ ಮಾಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸರ್ಕಾರ ಇದಕ್ಕಾಗಿ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ಮಾಹಿತಿ ನೀಡಿದೆ.

ಧಾರ್ಮಿಕ ಕಾರ್ಯಕ್ರಮಗಳು : ಫೆ. 10 ರಂದು ತ್ರಯೋದಶಿ, ಪುಷ್ಯ ಪ್ರಾತಃಕಾಲ 9 ಗಂಟೆಗೆ ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅತಿಥಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ