Breaking News

ಕೈ ಮುಗಿದು ಕೇಳುವೆ, ಪ್ರಧಾನಿ ಬದಲಿಸಿ: ಸಂತೋಷ್ ಲಾಡ್

Spread the love

ಹಾಸನ: ಸಾಹೇಬ್ರು ದಿನಕ್ಕೆ ಮೂರು ಬಾರಿ ಬಟ್ಟೆ ಬದಲಾಯಿಸುತ್ತಾರೆ, 16 ಗಂಟೆ ಕೆಲಸ ಮಾಡ್ತಾರೆ ಅಂತಾರೆ, ಆದರೆ ಏನು ಕೆಲಸ ಮಾಡ್ತಾರೆ ಅನ್ನೋದು ಜನರಿಗೆ ಗೊತ್ತಾಗುತ್ತಿಲ್ಲ, ಹಾಗಾಗಿ ಬಿಜೆಪಿಯವರಿಗೆ ಕೈ ಮುಗಿದು ಕೇಳುವೆ, ದೇಶದ ಮಹಾರಾಜ ಎನಿಸಿಕೊಳ್ಳುವ ಪ್ರಧಾನಿ ಮೋದಿ ಅವರನ್ನು ಬದಲು ಮಾಡಿ, ಇದೇ ದೇಶಕ್ಕೆ ಸಿಗುವ ಪರಿಹಾರ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೋದಿ ಬಗ್ಗೆ ಲೇವಡಿ ಮಾಡಿದರು.

ಹಾಸನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ದೇಶ ಯಾವ ಪಕ್ಷದ ಸ್ವತ್ತಲ್ಲ. ಬಿಜೆಪಿ ಅಥವಾ ಕಾಂಗ್ರೆಸ್​​​​ಗೆ ಈ ದೇಶವನ್ನು ಒಪ್ಪಿಸಲು ಸಾಧ್ಯವಿಲ್ಲ. ಬಿಜೆಪಿಯವರಿಗೆ ಕೈ ಮುಗಿದು ಕೇಳುತ್ತೇನೆ. ಮೊದಲು ನಿಮ್ಮ ಮಹಾರಾಜನಾಗಿರುವ ದೇಶದ ಪ್ರಧಾನಿಯನ್ನು ಬದಲಾಯಿಸಿ. ಇದರಿಂದ ದೇಶದಕ್ಕೆ ಪರಿಹಾರ ಸಿಗುತ್ತದೆ ಎಂದು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು

.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ