Breaking News

ಯುದ್ಧದಲ್ಲಿ ಸೈನಿಕ ಶಸ್ತ್ರವನ್ನು ಕೆಳಗಿಟ್ಟ ಎಂದ ಮಾತ್ರಕ್ಕೆ, ಯುದ್ಧ ನಿಲ್ಲಿಸಿದ ಎಂದರ್ಥವಲ್ಲ. ಆ ಶಸ್ತ್ರ ಬದಲು ಬೇರೆ ಶಸ್ತ್ರದ ಆಯ್ಕೆ

Spread the love

ಮೈಸೂರು: “ಮುಡಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವುದಿಲ್ಲ. ಬದಲಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿ, ನಾನೇ ವಾದ ಮಾಡಿ, ಅದಷ್ಟು ಬೇಗ ಮುಡಾ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇನೆ. ಅದಕ್ಕೆ ಬೇಕಾದ ಎಲ್ಲ ಸಾಕ್ಷ್ಯಾಧಾರಗಳು ನನ್ನಲಿವೆ. ನಾನು ಎಂದಿಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ” ಎಂದು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮುಡಾ 50:50 ಅನುಪಾತದಲ್ಲಿ ಪಡೆದಿರುವ ಸೈಟ್​ಗಳ ಮಾಹಿತಿ ನನ್ನ ಬಳಿಯಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷಿ ಆಧಾರಗಳಿವೆ. ನನ್ನ‌ 15 ವರ್ಷದ ಕಾನೂನಿನ ಹೋರಾಟದ ಬದುಕಿನಲ್ಲಿ ಸಾಕಷ್ಟು ಅನುಭವ ಪಡೆದುಕೊಂಡಿದ್ದೇನೆ. ಹೀಗಾಗಿ ನನ್ನ ಬಳಿ ಇರುವ ಸಾಕ್ಷಿ ಮತ್ತು ನನ್ನ‌ ಅನುಭವದ ಮೂಲಕ ಆರೋಪಿಗಳಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇನೆ.” ಎಂದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಬಿಐಗೆ ವಹಿಸುವ ವಿಷಯದಲ್ಲಿ ನ್ಯಾಯಾಲಯದಲ್ಲಿ ನಾಲ್ಕು ತಿಂಗಳ ಹೋರಾಟ ಮಾಡಿದ್ದೇನೆ. ಮತ್ತೆ ಅರ್ಜಿಯನ್ನು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದರೆ, ಮತ್ತಷ್ಟು ತಿಂಗಳು ವ್ಯರ್ಥವಾಗಬಹುದು ಎಂಬ ಕಾರಣಕ್ಕೆ ಮೇಲ್ಮನವಿ ಸಲ್ಲಿಸುವ ನಿರ್ಧಾರದಿಂದ ಹಿಂದಿ ಸರಿದಿದ್ದೇನೆ. ಲೋಕಾಯುಕ್ತ ಸಲ್ಲಿಸಿದ ವರದಿಯನ್ನು ಇಟ್ಟುಕೊಂಡು ನನ್ನ ಬಳಿ‌ ಇರುವ ದಾಖಲಾತಿಗಳ ಸಹಾಯದಿಂದ ಇನ್ನೂ ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸಬಹುದು. ಹೀಗಾಗಿ ನನ್ನ ಹೋರಾಟದ ಸ್ವರೂಪವನ್ನು ಬದಲಾವಣೆ ‌ಮಾಡಿಕೊಂಡಿದ್ದೇನೆ” ಎಂದು ಹೇಳಿದರು.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ