Breaking News

ಯತ್ನಾಳ್​ಗೆ ಶಿಸ್ತು ಪಾಲನಾ ಸಮಿತಿಯಿಂದ ಶೋಕಾಸ್ ನೋಟಿಸ್

Spread the love

ಬೆಂಗಳೂರು: ರಾಜ್ಯ ಬಿಜೆಪಿ ಬಣ ಬಡಿದಾಟ ರಾಯಕೀಯ ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮತ್ತೊಮ್ಮೆ ಬಿಸಿ ಮುಟ್ಟಿಸಲು, ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಮಧ್ಯಪ್ರವೇಶ ಮಾಡಿದೆ. ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಪಾಲನಾ ಸಮಿತಿ ನೋಟಿಸ್ ಜಾರಿ ಮಾಡಿದೆ.

ಪಕ್ಷದ ಶಿಸ್ತು ಪಾಲನೆ ಮಾಡದಿರುವ ಬಗ್ಗೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಯತ್ನಾಳ್, 72 ಗಂಟೆಯೊಳಗೆ ಉತ್ತರಿಸುವಂತೆ ಸಮಿತಿ ಸೂಚನೆ ನೀಡಿದೆ.

SHOW CAUSE NOTICE

ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂದು ಯತ್ನಾಳ್ ಹಾಗೂ ಅವರ ಬಣದ ಕೆಲ ನಾಯಕರು ಪಟ್ಟು ಹಿಡಿದಿದ್ದು, ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದಾರೆ.

ಇಂದೂ ಸಹ ಯತ್ನಾಳ್ ಬಣದ ನಾಯಕರು ದೆಹಲಿಯಲ್ಲಿ ಸಭೆ ನಡೆಸಿದ್ದು, ಕೇಂದ್ರ ಸಚಿವ ಸೋಮಣ್ಣ ಅವರ ಮನೆಯ ಪೂಜೆಗೆ ತೆರಳಿದ್ದರು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಯತ್ನಾಳ್ ಅವರಿಗೆ ಮತ್ತೊಂದು ಶೋಕಾಸ್ ನೋಟಿಸ್ ನೀಡಲಾಗಿದೆ.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ