Breaking News

ಭದ್ರಾವತಿ ಶಾಸಕ ಸಂಗಮೇಶ್ ಮಗನ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ರಾಜಣ್ಣ

Spread the love

ಬೆಂಗಳೂರು: ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ ‘ಪುತ್ರರತ್ನ’ ಬಸವೇಶ್ ನಿನ್ನೆ ಭದ್ರಾವತಿಯ ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರಿಗೆ ಕೆಟ್ಟ ಪದಗಳನ್ನು ಬಳಸಿ ಬೈದಾಡಿರುವ ಸಂಗತಿ ಕನ್ನಡಿಗರಿಗೆಲ್ಲ ಗೊತ್ತಿದೆ.

ಒಂದು ಸುಸಂಸ್ಕೃತ ಕುಟುಂಬ ಯೋಚಿಸಲೂ ಸಾಧ್ಯವಿಲ್ಲದಂಥ ಕೆಟ್ಟ ಪದಗಳನ್ನು ಬಸವೇಶ್ ಅಧಿಕಾರಿಯ ವಿರುದ್ಧ ಬಳಸಿದ್ದಾನೆ. ಅವನು ಬಳಸಿದ ಭಾಷೆ ಮತ್ತು ಅಧಿಕಾರಿಯೊಂದಿಗೆ ನಡೆದುಕೊಂಡಿರುವ ರೀತಿಯನ್ನು ಸಹಕಾರ ಸಚಿವ ಕೆಎನ್ ರಾಜಣ್ಣ ತೀವ್ರವಾಗಿ ಖಂಡಿಸಿದ್ದಾರೆ.

ಶಾಸಕನ ಮಗನಾಗಲೀ ಆಥವಾ ಮಂತ್ರಿಯ ಮಗ, ಹಾಗೆ ಮಾತಾಡಕೂಡದು, ಬಸವೇಶ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಎಂದು ರಾಜಣ್ಣ ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ