Breaking News

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ 1 ವರ್ಷ ಶಿಕ್ಷೆ

Spread the love

ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-1) ತೀರ್ಪು ನೀಡಿದೆ. ದೇಶದಲ್ಲಿ ಬಿಎನ್‌ಎಸ್‌ (ಭಾರತೀಯ ನ್ಯಾಯ ಸಂಹಿತೆ) ಕಾನೂನು ಜಾರಿಗೆ ಬಂದ ಬಳಿಕ ನೋಂದಣಿಯಾದ ಪೋಕ್ಸೋ ಪ್ರಕರಣದ ಮೊದಲ ತೀರ್ಪು ಇದು. ಕೇವಲ ಮೂರುವರೆ ತಿಂಗಳಲ್ಲಿ ತೀರ್ಪು ಪ್ರಕಟವಾಗಿದೆ.

ಮೆಕ್ಯಾನಿಕ್‌ ಆಗಿ ಕೆಲಸ ಮಾಡಿಕೊಂಡಿದ್ದ 24 ವರ್ಷದ ಯುವಕನೇ ಶಿಕ್ಷೆಗೀಡಾದ ಅಪರಾಧಿ.

2024ರ ಅ.5, 10, 15ರಂದು ಘಟನೆ ನಡೆದಿದೆ. ಅ.5ರಂದು ಕುಕ್ಕೇಡಿ ಗೋಳಿಯಂಗಡಿಯ ನಿರ್ಜನ ರಸ್ತೆಯಲ್ಲಿ ಯುವತಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಆರೋಪಿ ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದನು. ಅ.10ರಂದು ಬೆಳಗ್ಗೆ 7.45ರ ಸುಮಾರಿಗೆ ಮತ್ತೆ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಯು ವಿದ್ಯಾರ್ಥಿನಿಗೆ ಬೈಕ್‌ ತಾಗಿಸಿಕೊಂಡು ‘ನಿನ್ನನ್ನು ಕಾಲೇಜಿಗೆ ಬಿಡಬೇಕಾ? ನಿನ್ನ ಮೊಬೈಲ್‌ ನಂಬರ್‌ ಕೊಡು’ ಎಂದು ಕೇಳಿದ್ದಾನೆ. ಅ.15ರಂದು ಬೆಳಗ್ಗೆ 7.45ಕ್ಕೆ ಮತ್ತೆ ಬೈಕ್‌ನಲ್ಲಿ ಬಂದು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಸೆಕ್ಷನ್‌ 12ರಡಿ ಪೋಕ್ಸೋ ಮತ್ತು ಬಿಎನ್‌ಎಸ್‌ 78ರ ಅಡಿ ಪ್ರಕರಣ ದಾಖಲಾಗಿತ್ತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ