ವಿಜಯಪುರ: ಮಹಾನಗರ ಪಾಲಿಕೆಯನ್ನು ಬಿಜೆಪಿ ವಶಕ್ಕೆ ಪಡೆಯುವಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಸ್ಟರ್ ಪ್ಲ್ಯಾನ್ ಸೆಕ್ಸೆಸ್ ಕಾಣತೊಡಗಿದೆ. ಇದೀಗ ಪಾಲಿಕೆ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಇದೀಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದನ್ನು ಶಾಸಕ ಯತ್ನಾಳರ ಮಾಸ್ಟರ್ ಸ್ಟ್ರೋಕ್ ಎಂತಲೇ ಕರೆಯಲಾಗುತ್ತಿದೆ.
ವಿಜಯಪುರ ನಗರ ಶಾಸಕಾದ ಬಸನಗೌಡ ಪಾಟೀಲ ಯತ್ನಾಳ ರವರ ಅಭಿವೃದ್ಧಿ ಕಾರ್ಯ ಮೆಚ್ಚಿ ಮಹಾನಗರ ಪಾಲಿಕೆ ವಾರ್ಡ್ ನಂ.17 ರ ಪಕ್ಷೇತರರ ಸದಸ್ಯೆ ಸುಮಿತ್ರಾ ಜಾಧವ ಹಾಗೂ ಅವರ ಪತಿ ರಾಜು ಜಾಧವ ಅವರು ಬುಧವಾರ ನಗರದಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಮುಖಂಡರು ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಈಗಾಗಲೇ ಸದಸ್ಯೆ ಸುಮಿತ್ರಾ ಜಾಧವ ಅವರು ಉಪಮೇಯರ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಕೇಶವ ಪ್ರಸಾದ, ಜಿಲ್ಲಾಧ್ಯಕ್ಷರಾದ ಆರ್.ಎಸ್.ಪಾಟೀಲ ಕೂಚಬಾಳ, ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ, ಈರಣ್ಣ ರಾವೂರ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.