Breaking News

ಮಹಾ ಕುಂಭಮೇಳ : ಮೈಸೂರು-ತುಂಡ್ಲಾ ನಡುವೆ ಮತ್ತೊಂದು ವಿಶೇಷ ಎಕ್ಸ್​ಪ್ರೆಸ್ ರೈಲು ಸೌಲಭ್ಯ

Spread the love

ಹುಬ್ಬಳ್ಳಿ: ಪ್ರಯಾಗರಾಜ್ ಮಹಾ​ ಕುಂಭಮೇಳದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಮೈಸೂರು ಮತ್ತು ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​ಪ್ರೆಸ್ ರೈಲು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ರೈಲು ಸಂಖ್ಯೆ 06219 ಮೈಸೂರು-ತುಂಡ್ಲಾ ವಿಶೇಷ ಎಕ್ಸ್​ಪ್ರೆಸ್ ರೈಲು ಫೆ.20ರಂದು (ಗುರುವಾರ) ಮೈಸೂರಿನಿಂದ ರಾತ್ರಿ 9:40 ಗಂಟೆಗೆ ಹೊರಟು, ಫೆಬ್ರವರಿ 23ರಂದು (ಭಾನುವಾರ) ಬೆಳಗ್ಗೆ 9:30 ಗಂಟೆಗೆ ತುಂಡ್ಲಾ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06220) ಫೆ.24ರಂದು (ಸೋಮವಾರ) ತುಂಡ್ಲಾ ನಿಲ್ದಾಣದಿಂದ ಬೆಳಗ್ಗೆ 11:30 ಗಂಟೆಗೆ ಹೊರಟು, ಬುಧವಾರ (ಫೆ.26) ರಾತ್ರಿ 10 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.

ಎಲ್ಲೆಲ್ಲಿ ನಿಲುಗಡೆ ? ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ರಾಮನಗರ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ, ಕುಡಚಿ, ಮೀರಜ್, ಪುಣೆ, ದೌಂಡ್ ಕಾರ್ಡ್ ಲೈನ್, ಮನ್ಮಾಡ್, ಭೂಸಾವಲ್, ಇಟಾರ್ಸಿ, ಪಿಪಾರಿಯಾ, ನರಸಿಂಗ್ಪುರ, ಜಬಲ್ಪುರ್, ಕಟ್ನಿ, ಮೈಹಾರ್, ಸತ್ನಾ, ಮಾಣಿಕ್ಪುರ್, ಪ್ರಯಾಗರಾಜ್, ಫತೇಪುರ್, ಗೋವಿಂದಪುರಿ, ಇಟಾವಾ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ