Breaking News

ಉದಯಗಿರಿ ಪ್ರಕರಣದ ಬೆನ್ನಲ್ಲೇ ಮೈಸೂರು ಸಿಸಿಬಿ ಎಸಿಪಿ ವರ್ಗಾವಣೆ – CCB ACP TRANSFER

Spread the love

ಮೈಸೂರು: ಮೈಸೂರು ನಗರ ಸಿಸಿಬಿಯ ಎಸಿಪಿ ಸೇರಿ ಮೂವರು ಡಿವೈಎಸ್​ಪಿ ವೃಂದದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ.

ಸಿಐಡಿಯಲ್ಲಿದ್ದ ಮೊಹಮ್ಮದ್ ಶರೀಫ್ ರಾವುತರ್ ಅವರನ್ನು ಮೈಸೂರು ನಗರ ಸಿಸಿಬಿಯ ಎಸಿಪಿಯಾಗಿ, ರಾಜೇಂದ್ರ ಕೆ. ಅವರನ್ನು ದೇವರಾಜ ಉಪವಿಭಾಗದ ಎಸಿಪಿಯಾಗಿ ಮತ್ತು ಕೆಪಿಎ ಡಿವೈಎಸ್ಪಿಯಾಗಿದ್ದ ಶಿವಶಂಕ‌ರ್ ಎಂ. ಅವರನ್ನು ಮೈಸೂರು ನಗರ ಸಂಚಾರ ವಿಭಾಗದ ಎಸಿಪಿಯಾಗಿ ವರ್ಗಾಯಿಸಲಾಗಿದೆ.

ವರ್ಗಾಯಿಸಲಾದ ಸ್ಥಳದಲ್ಲಿ ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಳ್ಳುವಂತೆ ಆದೇಶಿಸಿಲಾಗಿದೆ. ಜೊತೆಗೆ ಇನ್ನು ನಿಯುಕ್ತಿಗೊಳಿಸದಿರುವ ಡಿವೈಎಸ್‌ಪಿ ವೃಂದದ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಆಡಳಿತ ಎಡಿಜಿಪಿ ಸೌಮೇಂದು ಮುಖರ್ಜಿ ಆದೇಶದಲ್ಲಿ ತಿಳಿಸಿದ್ದಾರೆ.

ಡಿವೈಎಸ್​ಪಿ ವೃಂದದ ಅಧಿಕಾರಿಗಳ ವರ್ಗಾವಣೆ,ಉದಯಗಿರಿ ಪ್ರಕರಣ, ಸಿಸಿಬಿ ಎಸಿಪಿ ವರ್ಗಾವಣೆ,CCB ACP,Police Transfer

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ