Breaking News

ಗಂಗಾವತಿ : ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋದ ತೆಲಂಗಾಣದ ವೈದ್ಯೆ –

Spread the love

ಗಂಗಾವತಿ (ಕೊಪ್ಪಳ) : ಸ್ನೇಹಿತರೊಂದಿಗೆ ರಜೆ ಕಳೆಯಲು ಆಗಮಿಸಿದ್ದ ತೆಲಂಗಾಣದ ಖಾಸಗಿ ಆಸ್ಪತ್ರೆಯ ವೈದ್ಯೆವೊಬ್ಬರು ಈಜಲು ಹೋಗಿ ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ತಾಲೂಕಿನ ಸಣಾಪುರದ ಬಳಿ ಸಂಭವಿಸಿದೆ. ನೀರಿನಲ್ಲಿ ನಾಪತ್ತೆಯಾಗಿರುವ ವೈದ್ಯೆಯನ್ನು ಹೈದರಾಬಾದ್​​ನ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯ ಮೋಹನ್​ ರಾವ್ ಎಂದು ಗುತಿಸಲಾಗಿದೆ.

ಇವರು ಹೈದರಾಬಾದ್​​ನ ವಿಕೆಸಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಕಳೆಯಲು ತಮ್ಮ ಸ್ನೇಹಿತರಾದ ಅಶಿತಾ ಮತ್ತು ಸಾತ್ವಿಕ್ ಜೊತೆ ಅನನ್ಯ ಅವರು ಸಣಾಪುರ ಸಮೀಪ ಇರುವ ಖಾಸಗಿ ಗೆಸ್ಟ್​ಹೌಸ್​ಗೆ ಮಂಗಳವಾರ ಸಂಜೆ ಬಂದಿಳಿದಿರುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

ಈ ಗೆಸ್ಟ್ ಹೌಸ್ ಹಿಂದೆ ಇರುವ ತುಂಗಭದ್ರಾ ನದಿಯಲ್ಲಿ ಈ ಮೂವರು ಈಜಲು ಹೋಗಿದ್ದರು. ಈ ಪೈಕಿ ಅನನ್ಯ, ನದಿಯಲ್ಲಿ ಈಜಲು ಸಮೀಪದ ಬಂಡೆಯೊಂದರ ಮೇಲಿಂದ ನೀರಿಗೆ ಜಿಗಿದಿದ್ದಾರೆ. ನದಿಯಲ್ಲಿನ ನೀರಿನ ಸೆಳೆತದಿಂದ ಕೊಚ್ಚಿ ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ