ಕಾರವಾರ: ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪತಿ, ಪತ್ನಿ ಮತ್ತು 7 ತಿಂಗಳ ಮಗ ಸೇರಿದಂತೆ ಮೂವರು ಸಾವನ್ನಪ್ಪಿದ ದಾರುಣ ಘಟನೆ ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಬುಧವಾರ ನಡೆದಿದೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಪ್ಪಳ ಮೂಲಕ ಶ್ರೀಕಾಂತ ರೆಡ್ಡಿ (37), ಅವರ ಪತ್ನಿ ಚೈತ್ರಾ ಆರ್(31) ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಅಪಘಾತದಲ್ಲಿ ಮೃತಟಪಟ್ಟವರು. ಕಾರು ಚಾಲಕ ಆರ್ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಲ್ಲಿ ಇವರು ಕುಟುಂಬ ಸಮೇತರಾಗಿ ಅಂಕೋಲಾದಿಂದ ಹುಬ್ಬಳ್ಳಿ ಕಡೆ ಹೊರಟ್ಟಿದ್ದರು. ಈ ವೇಳೆ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಅಪಘಾತ ಸಂಭವಿಸಿದೆ.
ಲಾರಿ ಚಾಲಕ ವೇಗವಾಗಿ ಬಂದು ಅರಬೈಲ್ ಮಾರುತಿ ದೇವಾಲಯದದಿಂದ ಸ್ವಲ್ಪ ಮುಂದೆ ನಿಯಂತ್ರಣ ತಪ್ಪಿ ಬಲಕ್ಕೆ ಹೊರಳಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ರಭಸವಾಗಿ ಲಾರಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಬಿಜಾಪುರದ ಪ್ರಶಾಂತ ಕುಂಬಾರ ಎಂಬಾತನೇ ಲಾರಿ ಚಾಲಕ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
Laxmi News 24×7