Breaking News

ಕಾಪಿ ಚೀಟಿ ಕೊಡುವ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ : ಅನುಮಾನಾಸ್ಪ ರೀತಿಯಲ್ಲಿ ಮೃತಪಟ್ಟ ಯುವಕ

Spread the love

ವಿಜಯಪುರ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಾಪಿ ಚೀಟಿ ಕೊಡಲು ಹೋಗಿದ್ದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬಸವನಬಾಗೇವಾಡಿ ತಾಲೂಕಿನ ಕಾನಾಳ ಗ್ರಾಮದ ಸಾಗರ ಚಲವಾದಿ (19) ಅನುಮಾನಾಸ್ಪ ರೀತಿಯಲ್ಲಿ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಹೂವಿನಹಿಪ್ಪರಗಿ ಗ್ರಾಮದ ವಿಶ್ವಚೇತನ ಪರೀಕ್ಷಾ ಕೇಂದ್ರಕ್ಕೆ ನುಗ್ಗಿ ನಕಲು ಮಾಡಲು ಕಾಪಿ ಚೀಟಿ ಕೊಡುವ ವೇಳೆ ಪೊಲೀಸರು ಯುವಕನನ್ನು ಹಿಡಿದು, ಲಾಠಿ ರುಚಿ ತೋರಿಸಿದ್ದಾರೆ. ಈ ವೇಳೆ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಪೊಲೀಸರ ಹೊಡೆತಕ್ಕೆ ತಮ್ಮ ಮಗ ಮೃತಪಟ್ಟಿದ್ದಾನೆ ಎಂದು ಯುವಕ ಕುಟುಂಬ ಸದಸ್ಯರು ಆರೋಪಿಸುತ್ತಿದ್ದಾರೆ. ಆದರೆ ಹೃದಯ ಸಂಬಂಧಿ ಕಾಯಿಲೆ ಇದ್ದ ಕಾರಣ ಯುವಕ ಪೊಲೀಸರ ಬಂಧನದಿಂದ ಗಾಬರಿಗೊಂಡು ಹೃದಯಾಘಾತವಾಗಿ ಮೃತಪಟ್ಟಿದ್ದಾನೆಂದು ಪೊಲೀಸರು ವಾದಿಸುತ್ತಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬಸವನಬಾಗೇವಾಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.


Spread the love

About Laxminews 24x7

Check Also

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ

Spread the love ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ