ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕಿತರ ಸಂಖ್ಯೆ ಸ್ಫೋಟಗೊಂಡಿದ್ದು, ಒಂದೇ ದಿನ 918 ಸೋಂಕು ಪ್ರಕರಣಗಳು ವರದಿಯಾಗಿದ್ದು, 11 ಮಂದಿ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಸಂಜೆ ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿ ಸಾವಿರ ಸಮೀಪ ಸೋಂಕು ಪ್ರಕರಣ ದಾಖಲಾಗಿದೆ. ಮತ್ತಷ್ಟು ಆಘಾತಕಾರಿ ವಿಷಯ ಅಂದರೆ ರಾಜಧಾನಿ ಬೆಂಗಳೂರಿನಲ್ಲಿ 596 ಸೋಂಕು ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 11 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 191ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 3 ಮಂದಿ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 2531ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 11 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 191ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 11923ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 3 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. ಅಲ್ಲದೇ ಸೋಂಕಿತರ ಸಂಖ್ಯೆ 2531ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 4441 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 7287 ಗುಣಮುಖರಾಗಿದ್ದಾರೆ.
ಬೆಂಗಳೂರು 596, ದಕನ್ನಡ 49, ಕಲಬುರಗಿ 33, ಬಳ್ಳಾರಿ 24, ಗದಗ 24, ಧಾರವಾಡ 19, ಬೀದರ್ 17 ಉಡುಪಿ, ಹಾಸನ 14, ಯಾದಗಿರಿ, ಶಿವಮೊಗ್ಗ, ಚಾ,ನಗರ ತಲಾ 13, ಮಂಡ್ಯ, ಮೈಸೂರು ತಲಾ 12, ಕೊಡಗು 9, ದಾವಣಗೆರೆ, ರಾಯಚೂರು 6, ಬೆಂಗಳೂರು ಗ್ರಾಮಾಂತರ 5, ಉತ್ತರ ಕನ್ನಡ 2, ಚಿಕ್ಕಮಗಳೂರು, ಬಾಗಲಕೋಟೆ, ಚಿತ್ರದುರ್ಗ, ಬೆಳಗಾವಿ, ಚಿಕ್ಕಬಳ್ಳಾಪುರ ತಲಾ 2 ಹಾಗೂ ಬೆಳಗಾವಿ, ಚಿಕ್ಕಬಳ್ಳಾಪುರ, ಹಾವೇರಿಯಲ್ಲಿ ತಲಾ 1 ಪ್ರಕರಣಗಳು ದೃಢಪಟ್ಟಿವೆ.