Breaking News

82ನೇ ದಾಖಲೆಯ ಶತಕ; ಪಾಕ್ ವಿರುದ್ಧ ಗೆಲುವಿನ ಸೆಂಚುರಿ ಬಾರಿಸಿದ ವಿರಾಟ್

Spread the love

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ 5 ನೇ ಪಂದ್ಯದಲ್ಲಿ, ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದಾರೆ. ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ 82 ನೇ ಶತಕವಾಗಿದೆ. ಅದೇ ಸಮಯದಲ್ಲಿ, ಪಾಕಿಸ್ತಾನ ವಿರುದ್ಧ ಅವರು ನಾಲ್ಕನೇ ಬಾರಿಗೆ 100 ರನ್​ಗಳ ಗಡಿ ದಾಟಿದ ಸಾಧನೆ ಮಾಡಿದ್ದಾರೆ.
ರನ್ ಬರ.. ಕಳಪೆ ಫಾರ್ಮ್​.. ನಿವೃತ್ತಿ ಘೋಷಿಸಿಸಿ… ಕಳೆದ ಕೆಲವು ದಿನಗಳಿಂದ ಕೊಹ್ಲಿ ವಿಚಾರದಲ್ಲಿ ಹಲವು ಕ್ರಿಕೆಟ್ ಪಂಡಿತರು ಹೇಳುತ್ತಿದ್ದ ಮಾತಿದು.
ಆದರೆ ಇಂದು ನಡೆದ ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಗೆಲುವಿನ ಶತಕ ಬಾರಿಸಿದ ವಿರಾಟ್ ಕೊಹ್ಲಿ, ಈ ಒಂದು ಶತಕದೊಂದಿಗೆ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.
ಅಲ್ಲದೆ ಆರಂಭದಿಂದಲೂ ಕೊನೆಯವರೆಗೂ ಅಜೇಯರಾಗಿ ಉಳಿದು ತಂಡವನ್ನು ಜಯದ ದಡ ಮುಡಿಸಿದ್ದಾರೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಸುತ್ತಿಗೆ ಭಾಗಶಃ ಅರ್ಹತೆ ಪಡೆದರೆ, ಇತ್ತ ಪಾಕಿಸ್ತಾನ ತಂಡ ಲೀಗ್ ಹಂತದಲ್ಲೇ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳುವ ಆತಂಕದಲ್ಲಿದೆ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ