ಬೆಂಗಳೂರು, ಫೆಬ್ರವರಿ 25: ಸಿಎಂ ಸಿದ್ದರಾಮಯ್ಯ ಈ ಬಾರಿ 16ನೇ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಶುರುವಾಗಿದೆ.
ಸತತ 2-3 ವಾರಗಳಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳಲ್ಲಿ ವ್ಯಸ್ತರಾಗಿದ್ದಾರೆ. ವಿವಿಧ ಇಲಾಖೆಗಳ ಸಚಿವರು, ಅಧಿಕಾರಗಳ ಜೊತೆ ಸರಣಿ ಸಭೆ ನಡೆಸುತ್ತಿದ್ದಾರೆ.
ವಿವಿಧ ಸಂಘ ಸಂಸ್ಥೆಗಳು, ವಿವಿಧ ಸಮುದಾಯಗಳ ಮಠಾಧೀಶರ ಜೊತೆಗೂ ಸೋಮವಾರ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ.
ಸಚಿವರಾದ ಎಂಬಿ ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ಸೇರಿದಂತೆ ಲಿಂಗಾಯತ ಸಮುದಾಯದ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದೆ. ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ಸಾಲು ಸಾಲು ಮನವಿಗಳನ್ನು ಸಲ್ಲಿಕೆ ಮಾಡಲಾಗಿದೆ.