Breaking News

2024 – 25ರಲ್ಲಿ ಪಂಚ ಗ್ಯಾರಂಟಿಗೆ ಬಿಡುಗಡೆಯಾದ SCSPTSP ಹಣವೆಷ್ಟು? –

Spread the love

ಬೆಂಗಳೂರು: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಗಣನೀಯವಾಗಿ ಪರಿಶಿಷ್ಠರಿಗೆ ಮೀಸಲಿಟ್ಟ ಅನುದಾನ ಬಳಕೆ ಮಾಡಲಾಗುತ್ತಿದೆ. ಗ್ಯಾರಂಟಿಗಳಿಗೆ ಬಹುಪಾಲು ಹಣ ಬಳಕೆಯಾಗುತ್ತಿರುವುದು ಎಸ್​ಸಿಎಸ್​ಪಿ ಮತ್ತು ಟಿಎಸ್​​ಪಿ ಹಣ. ಈ ಸಂಬಂಧ ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಅಷ್ಟಕ್ಕೂ ಈವರೆಗೆ ರಾಜ್ಯ ಸರ್ಕಾರ ಎಸ್​ಸಿಎಸ್​ಪಿ ಮತ್ತು ಟಿಎಸ್​​ಪಿ ಅನುದಾನದಿಂದ ಪಂಚ ಗ್ಯಾರಂಟಿಗಳಿಗಾಗಿ ಹಣ ಬಿಡುಗಡೆ ಮಾಡಿದ್ದೆಷ್ಟು ಎಂಬ ಸಮಗ್ರ ವರದಿ ಇಲ್ಲಿದೆ.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಎಸ್​ಸಿಎಸ್​ಪಿ ಮತ್ತು ಟಿಎಸ್​​ಪಿ) ಅನುದಾನ ಬಳಕೆ ಮಾಡುತ್ತಿರುವ ಬಗ್ಗೆ ಪ್ರತಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ತೀವ್ರ ವಿರೋಧದ ಮಧ್ಯೆಯೂ ಸರ್ಕಾರ ಈಗಾಗಲೇ ಎಸ್​ಸಿಎಸ್​ಪಿ ಮತ್ತು ಟಿಎಸ್​​ಪಿ ಅನುದಾನದಿಂದ ಪಂಚ ಗ್ಯಾರಂಟಿಗಳಿಗಾಗಿ ಹಣ ಬಿಡುಗಡೆ ಮಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ತೀವ್ರ ಕಸರತ್ತಿನೊಂದಿಗೆ ಪಂಚ ಗ್ಯಾರಂಟಿಗಳಿಗೆ ಹಣ ನಿರ್ವಹಣೆ ಮಾಡುತ್ತಿದೆ. 2024 – 25 ಸಾಲಿನಲ್ಲಿನ ಗ್ಯಾರಂಟಿಗಳಿಗಾಗಿ ಸುಮಾರು 52,000 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ