Breaking News

ರೈತರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳರ ಬಂಧನ

Spread the love

ಹಾವೇರಿ: ಜಿಲ್ಲೆಯ ಅನ್ನದಾತರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳರನ್ನು ಪೊಲೀಸರು ಬಂಧಿಸುವಲ್ಲಿ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ದಾದಾಪೀರ್ ಕಡೇಮನಿ (35), ಜುಬೇರ್ (25), ಅಬ್ದುಲ್ ಸತ್ತರ್(38), ಪಾರೂಕ್ (23) ಮತ್ತು ಅಕ್ರಂ ಅಲಿ (25) ಎಂದು ಗುರುತಿಸಲಾಗಿದೆ. ಬಂಧಿತರಿಂದ 7 ಲಕ್ಷ 50 ಸಾವಿರ ರೂ ಮೌಲ್ಯದ ಮೂರು ಎತ್ತು‌ಗಳು ಮತ್ತು ಬೊಲೆರೋ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಬಂಧಿತ‌ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಫೆ.22 ರಂದು ಆರೋಪಿಗಳು ಶಿಗ್ಗಾಂವ್ ತಾಲೂಕಿನ ಕಲ್ಯಾಣ ಗ್ರಾಮದಲ್ಲಿ ಒಂದು ಎತ್ತನ್ನು ಕಳ್ಳತನ ಮಾಡಿದ್ದರು. ಅಲ್ಲದೇ ಅಗಡಿ ಗ್ರಾಮದಲ್ಲಿ ಎರಡು ಎತ್ತುಗಳನ್ನು ಕದ್ದು ಪರಾರಿಯಾಗಿದ್ದರು. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು.ಪ್ರಕರಣದ ಬೆನ್ನು ಬಿದ್ದ ಪೊಲೀಸರು, ಬುಧವಾರ ಸಂಜೆ ಆರು ಗಂಟೆಗೆ ಬಾಡದ ಅರಮನೆ ಬಳಿ ಆರೋಪಿಗಳನ್ನು ಬಂಧಿಸಿ, ವಿಚಾರಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳು ಜಾನುವಾರುಗಳ ಕಳ್ಳತನ ಮಾಡಿರುವ ವಿಷಯ ಬಾಯಿ ಬಿಟ್ಟಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ